Breaking News

28 ವರ್ಷಗಳ ಬಳಿಕ ಕಾಶ್ಮೀರಕ್ಕೆ ಮಾಜಿ ಪ್ರಧಾನಿ ದೇವೇಗೌಡರು ಭೇಟಿ

Spread the love

ತಾವು ಪ್ರಧಾನಿಗಳಾದ 28 ವರ್ಷಗಳ ನಂತರ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಕಣಿವೆ ರಾಜ್ಯ ಕಾಶ್ಮೀರಕ್ಕೆ ಭೇಟಿ ನೀಡಿ ದೇಶದ ಕೊನೆಯ ಭಾಗದಲ್ಲಿರುವ ಉರಿ ಜಲವಿದ್ಯುತ್ ಘಟಕವನ್ನು ಖುದ್ದು ವೀಕ್ಷಿಸಿದರು.

 

ಬುಧವಾರವೇ ಶ್ರೀನಗರಕ್ಕೆ ಆಗಮಿಸಿದ್ದ ಮಾಜಿ ಪ್ರಧಾನಿಗಳು, 28 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಕಣಿವೆ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಗುರುವಾರ ಬೆಳಗ್ಗೆಯೇ ಶ್ರೀನಗರದಿಂದ ಬಾರಮುಲ್ಲಾಕ್ಕೆ ರೈಲಿನಲ್ಲಿ ಪ್ರಯಾಣ ಮಾಡಿ; ತಾವು ಪ್ರಧಾನಿಗಳಾಗಿದ್ದ ಸಂದರ್ಭದಲ್ಲಿ ಈ ರೇಲ್ವೆ ಮಾರ್ಗಕ್ಕೆ ಮಂಜೂರಾತಿ ನೀಡಿದ್ದನ್ನು ನೆನಪು ಮಾಡಿಕೊಂಡರು.

ಬಾರಾಮುಲ್ಲಾದಿಂದ ಉರಿಗೆ ತೆರಳಿದ ಅವರು; ಅಲ್ಲಿನ ರಾಷ್ಟ್ರೀಯ ಜಲವಿದ್ಯುತ್ ಉತ್ಪಾದನಾ ಘಟಕ (National Hydroelectric Power Corporation Private Limited- NHPC) ಕ್ಕೆ ಭೇಟಿ ಕೊಟ್ಟರು. 480 ಮೆಗಾವ್ಯಾಟ್ ಸಾಮರ್ಥ್ಯದ ಈ ವಿದ್ಯುತ್ ಘಟಕವೂ ದೇವೇಗೌಡರು ಪ್ರಧಾನಿಯಾಗಿದ್ದಾಗಲೇ ಉದ್ಘಾಟನೆ ಆಗಿತ್ತು. ಈ ವಿದ್ಯುತ್ ಉತ್ಪಾದನಾ ಘಟಕವೂ ಉರಿಯ ಝಿಲಂ ನದಿ ದಂಡೆಯಲ್ಲಿ, ಭಾರತ – ಪಾಕಿಸ್ತಾನದ ನಡುವಿನ ನಿಯಂತ್ರಣ ರೇಖೆಗೆ (LOC) ಅತಿ ಸಮೀಪದಲ್ಲಿದೆ.

ವಿದ್ಯುತ್ ಸ್ಥಾವರದ ಉದ್ದಗಲಕ್ಕೂ ತೆರಳಿದ ಮಾಜಿ ಪ್ರಧಾನಿಗಳು, ತಾವು ಘಟಕಕ್ಕೆ ಭೇಟಿ ನೀಡಿದ್ದ ಸಂದರ್ಭವನ್ನು ಸ್ಮರಣೆ ಮಾಡಿಕೊಂಡರಲ್ಲದೆ; ಅಲ್ಲಿನ ಸಿಬ್ಬಂದಿ, ಅಧಿಕಾರಿಗಳ ಜತೆ ಅಂದಿನ ಸಂದರ್ಭವನ್ನು, ಸೇನೆಯ ಎಚ್ಚರಿಕೆಯನ್ನು ಲೆಕ್ಕಿಸದೆ ಘಟಕದ ಸುರಂಗಕ್ಕೆ ಭೇಟಿ ಕೊಟ್ಟಿದ್ದನ್ನು ನೆನಪು ಮಾಡಿಕೊಂಡರು.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ