ಬೆಳಗಾವಿ: ‘ಮಳೆಗಾಲದಲ್ಲಿ ನಗರದ ಜನತೆಗೆ ಯಾವ ಕಾರಣಕ್ಕೂ ಮಣ್ಣುಮಿಶ್ರಿತ ನೀರು ಸರಬರಾಜು ಮಾಡಬಾರದು. ಬದಲಿಗೆ, ಶುದ್ಧ ಕುಡಿಯುವ ನೀರು ಪೂರೈಕೆಗೆ ಒತ್ತು ನೀಡಬೇಕು’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚಿಸಿದರು.
ಇಲ್ಲಿನ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ(ಕೆಯುಐಡಿಎಫ್‌ಸಿ) ಕಚೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
‘ಈಗ ಪಾಲಿಕೆ ವ್ಯಾಪ್ತಿಯ 10 ವಾರ್ಡ್‌ಗಳಿಗೆ 24×7 ಮಾದರಿಯಲ್ಲಿ ಕುಡಿಯುವ ನೀರು ಸರಬರಾಜು ಯೋಜನೆ ಜಾರಿಯಲ್ಲಿದೆ. ಉಳಿದ ವಾರ್ಡ್‌ಗಳಿಗೆ ಯೋಜನೆ ವಿಸ್ತರಿಸುವ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ನೀರು ಶುದ್ಧೀಕರಣ ಘಟಕ ಹಾಗೂ ಜಲ ಸಂಗ್ರಹಾಗಾರಗಳಲ್ಲಿ ಶುಚಿತ್ವ ಕಾಪಾಡಬೇಕು’ ಎಂದು ತಾಕೀತು ಮಾಡಿದರು.