Breaking News

ದರ್ಶನ್ ನಿಗಾಕ್ಕೆ CCTV, ಬಾಡಿವೋರ್ನ್ ಕ್ಯಾಮೆರಾ: ಸೂಪರಿಂಟೆಂಡೆಂಟ್‌ಗೆ DIG ಸೂಚನೆ

Spread the love

ಬೆಳಗಾವಿ: ಬಳ್ಳಾರಿ ಜೈಲಿನಲ್ಲಿ ದರ್ಶನ್ ಅವರನ್ನು ಹೇಗೆ ನೋಡಿಕೊಳ್ಳಬೇಕು ಎಂಬ ಬಗ್ಗೆ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಉತ್ತರವಲಯ ಡಿಐಜಿ ಟಿ.ಪಿ.ಶೇಷ ಅವರು ಜೈಲಿನ ಸೂಪರಿಂಟೆಂಡೆಂಟ್‌ ಜ್ಞಾಪನಾ ಪತ್ರ ಬರೆದಿದ್ದಾರೆ.

‘ದರ್ಶನ್ ಅವರನ್ನು ಪ್ರತ್ಯೇಕ ಕೊಠಡಿಯಲ್ಲಿ ಇರಿಸಬೇಕು.

ಆ ಕೊಠಡಿಗೆ 24×7 ಸಿಸಿಟಿವಿ ಕ್ಯಾಮೆರಾ ಕಣ್ಗಾವಲು ಇರಿಸಬೇಕು. ಪ್ರತಿನಿತ್ಯ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಶೇಖರಿಸಬೇಕು’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

‘ದರ್ಶನ್ ಇರುವ ಸೆಲ್‌ನ ಕರ್ತವ್ಯಕ್ಕೆ ಪ್ರತ್ಯೇಕವಾಗಿ ಒಬ್ಬ ಮುಖ್ಯವೀಕ್ಷಕ ಅಧಿಕಾರಿ ನಿಯೋಜಿಸಬೇಕು. ಪ್ರತಿನಿತ್ಯ ಜೈಲರ್ ಭೇಟಿ ನೀಡಿ ಭದ್ರತೆ ಪರಿಶೀಲಿಸಬೇಕು. ಕಾರಾಗೃಹದ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಬೀಗ ಹಾಕಬೇಕು ಮತ್ತು ಬೀಗ ತೆರೆಯಬೇಕು. ಕರ್ತವ್ಯ ನಿರ್ವಹಿಸುವ ಮುನ್ನ ಪ್ರತಿನಿತ್ಯ ದರ್ಶನ ಸೆಲ್ ತಪಾಸಣೆ ಮಾಡಬೇಕು. ಸೆಲ್‌ಗೆ ನಿಯೋಜಿಸುವ ಸಿಬ್ಬಂದಿ ‘ಬಾಡಿವೋರ್ನ್’ ಕ್ಯಾಮೆರಾ ಧರಿಸಬೇಕು’ ಎಂದೂ ನಿರ್ದೇಶನ ನೀಡಿದ್ದಾರೆ.

‘ದರ್ಶನ್ ಭೇಟಿಗೆ ಅವರ ಪತ್ನಿ, ರಕ್ತಸಂಬಂಧಿ, ವಕಾಲತ್ತು ವಹಿಸಿದ ವಕೀಲರ ಭೇಟಿಗೆ ಮಾತ್ರ ಅವಕಾಶ ನೀಡಬೇಕು. ಚಿತ್ರರಂಗದ ಕಲಾವಿದರು, ಅಭಿಮಾನಿಗಳು, ರಾಜಕೀಯ ನಾಯಕರ ಭೇಟಿಗೆ ಅವಕಾಶ ನೀಡಬಾರದು. ಸಾಮಾನ್ಯ ಬಂದಿಯಂತೆಯೇ ಪರಿಗಣಿಸಿ, ಸಾಮಾನ್ಯ ಬಂದಿಗೆ ಕೊಡುವ ಸೌಲಭ್ಯ ಮಾತ್ರ ನೀಡಬೇಕು. ಬೇರೆ ಕೈದಿಗಳ ಜೊತೆಗೆ ದರ್ಶನ್ ಬೆರೆಯವಂತಿಲ್ಲ. ಇದರ ಮೇಲೆ ನಿಗಾವಹಿಸಲು ಅಧಿಕಾರಿಗಳು ‘ದಿಢೀರ್ ಭೇಟಿ (ಸರ್ಪೈಸ್ ವಿಸಿಟ್)’ ಮಾಡಬೇಕು. ಕಾರಾಗೃಹ ಸುತ್ತಲೂ ಸೂಕ್ತ ಭದ್ರತೆ ಒದಗಿಸಬೇಕು’ ಎಂದೂ ಸೂಚಿಸಿದ್ದಾರೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ