Breaking News

ಕಾರ್ಮಿಕರು ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಲಿ’

Spread the love

ಗುಳೇದಗುಡ್ಡ: ಕಾರ್ಮಿಕರು ಸರ್ಕಾರಿ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು. ಮಕ್ಕಳಿಗೆ ಶಿಕ್ಷಣ, ಸಂಸ್ಕಾರ ನೀಡುವ ಮೂಲಕ ಕಟ್ಟಡ ಸೇರಿದಂತೆ ಇತರೆ ಕಾರ್ಮಿಕರು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಹನಮಂತ ಮಾವಿನಮರದ ಹೇಳಿದರು.

 

ಪಟ್ಟಣದ ಹೊಸಪೇಟೆ ಸಂಗನಬಸವೇಶ್ವರ ನಗರದಲ್ಲಿ ‌ಗುರುವಾರ ಲಕ್ಷ್ಮಿ ಕಟ್ಟಡ ಕಾರ್ಮಿಕರ ಸಂಘದ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾರ್ಮಿಕರಿಗೆ ಸರ್ಕಾರ ಸಾಕಷ್ಟು ಯೋಜನೆಗಳನ್ನು ರೂಪಿಸಿದೆ. ಅವುಗಳು ನೈಜ ಕಟ್ಟಡ ಕಾರ್ಮಿಕರಿಗೆ ತಲುಪಬೇಕು ಎಂದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಾಂತಗೌಡ ಪಾಟೀಲ ಮಾತನಾಡಿ, ಕಾರ್ಮಿಕರು ಈ ಸಮಾಜದ ಮುಖ್ಯ ಅಂಗ. ಅವರನ್ನು ಸಮಾಜ ಗೌರವದಿಂದ ಕಾಣಬೇಕು. ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವ ಕೆಲಸ ಮಾಡಬೇಕು ಎಂದರು.


Spread the love

About Laxminews 24x7

Check Also

ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿಗೆ 2:1ರ ಅನುಪಾತ: ಗೆಜೆಟ್ ಅಧಿಸೂಚನೆ ಪ್ರಕಟ

Spread the loveಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಗೆ ರಾಜ್ಯ ಸರ್ಕಾರವು ನಿಯಮಗಳನ್ನು ರೂಪಿಸಿ ಗೆಜೆಟ್ ಅಧಿಸೂಚನೆ ಪ್ರಕಟಿಸಿದೆ. ಅದರಂತೆ, ಪ್ರಾಥಮಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ