Breaking News

ಬಿಜೆಪಿ ಸದಸ್ಯ ಅಪಹರಣ; ಮೂವರ ಮೇಲೆ ಪ್ರಕರಣ

Spread the love

ನ್ನಮ್ಮನ ಕಿತ್ತೂರು: ಇಲ್ಲಿಯ ಪಟ್ಟಣ ಪಂಚಾಯಿತಿ ಚುನಾವಣೆಯ ಹಿನ್ನೆಲೆಯಲ್ಲಿ ಗುರುವಾರ ತಡರಾತ್ರಿ ಬಿಜೆಪಿ ಸದಸ್ಯ ನಾಗರಾಜ ಬಸವರಾಜ ಅಸುಂಡಿ (36) ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನಮ್ಮನ ಕಿತ್ತೂರು ಪೊಲೀಸರು ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ತಾಲ್ಲೂಕಿನ ಮೇಟ್ಯಾಲ ಗ್ರಾಮದ ಅಶೋಕ ಚನ್ನಬಸಪ್ಪ ಮಾಳಗಿ, ಚನ್ನಾಪುರದ ಬಸವರಾಜ ಶೇಖಪ್ಪ ಸಂಗೊಳ್ಳಿ ಮತ್ತು ಕಿತ್ತೂರಿನ ಸೋಮವಾರ ಪೇಟೆಯ ಸುರೇಶ ಈರಪ್ಪ ಕಡೇಮನಿ ಆರೋಪಿಗಳು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ನಾಗರಾಜ ತಂದೆ ಬಸವರಾಜ ಈ ಬಗ್ಗೆ ದೂರು ನೀಡಿದ್ದಾರೆ.

ಪ್ರತಿಭಟನೆ: ಪಟ್ಟಣ ಪಂಚಾಯಿತಿ ಚುನಾವಣೆಯ ಹಿನ್ನೆಲೆಯಲ್ಲಿ ನಾಗರಾಜ ಅವರನ್ನು ಅಪಹರಣ ಮಾಡಲಾಗಿದೆ ಎಂದು ತಿಳಿಸಿರುವ ಬಿಜೆಪಿ ಮುಖಂಡರು, ಶುಕ್ರವಾರ ಪ್ರತಿಭಟನೆ ಮಾಡುವುದಾಗಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ