Breaking News

ಬೆಂಗಳೂರಿನಿಂದ ಮಂಗಳೂರಿಗೆ ಕಾರಿನಲ್ಲಿ ಮಾದಕ ವಸ್ತು ಸಾಗಾಟ

Spread the love

ಮಂಗಳೂರು: ಕಾರಿನಲ್ಲಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳು ಬೆಂಗಳೂರಿನಿಂದ ಮಂಗಳೂರಿಗೆ ಬಾಡಿಗೆ ಕಾರಿನಲ್ಲಿ ಮಾದಕ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದರು. ಎಂಡಿಎಂಎ ಸೇರಿದಂತೆ ಹಲವು ಮಾದಕ ವಸ್ತು ಹಾಗೂ ಕಾರು ಸಮೇತ ಪೊಲಿಸರು ಮೂವರನ್ನು ಬಂಧಿಸಿದ್ದಾರೆ.

BREAKING NEWS:  ಬೆಂಗಳೂರಿನಿಂದ ಮಂಗಳೂರಿಗೆ ಕಾರಿನಲ್ಲಿ ಮಾದಕ ವಸ್ತು ಸಾಗಾಟ: ಮೂವರು ಅರೆಸ್ಟ್

ಶಾಜಹಾನ್, ಮೊಹಮ್ಮದ್ ನಿಸಾರ್, ಮನ್ಸೂರ್ ಬಂಧಿತ ಆರೋಪಿಗಳು. ಬಂಧಿತರಿಂದ 2.10 ಲಕ್ಷ ಮೌಲ್ಯದ 42 ಗ್ರಾಂ ಎಂಡಿಎಂಎ ಜಪ್ತಿ ಮಾಡಲಾಗಿದೆ. ಬಾಡಿಗೆ ಕಾರಿನಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ಡ್ರಗ್ಸ್ ಸಾಗಾಟ ಮಾಡುತ್ತಿದ್ದರು. ಆರೋಪಿಗಳು ಕರ್ನಾಟಕ ಹಾಗೂ ಕೇರಳ ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ