Breaking News

ಪೋಕ್ಸೊ’ ಕೇಸ್ ನಲ್ಲಿ ಮಾಜಿ ಸಿಎಂ `BSY’ಗೆ ಹೈಕೋರ್ಟ್ ಬಿಗ್ ರಿಲೀಫ್ : ಬಂಧಿಸದಂತೆ ನೀಡಿದ್ದ ಆದೇಶ ಮತ್ತೆ ವಿಸ್ತರಣೆ!

Spread the love

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ಮಧ್ಯಂತರ ಆದೇಶದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಆದೇಶಿಸಿದೆ.

 

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಪೋಕ್ಸೋ ಪ್ರಕರಣದಲ್ಲಿ ಬಂಧನದ ಭೀತಿ ಎದುರಾಗಿತ್ತು. ಈ ಹಿನ್ನಲೆಯಲ್ಲಿ ಬಿಎಸ್ ಯಡಿಯೂರಪ್ಪ ಅವರು ಪ್ರಕರಣ ರದ್ದುಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ವಿಚಾರಣೆಯನ್ನು ಸೆ. 5 ಕ್ಕೆ ಮುಂದೂಡಿದೆ.

ಈ ವರ್ಷದ ಮಾರ್ಚ್ 3 ರಂದು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಈ ದೂರಿನ ಆಧಾರದ ಮೇಲೆ ಎಫ್‌ಐಆರ್ ಕೂಡ ದಾಖಲಾಗಿದೆ.


Spread the love

About Laxminews 24x7

Check Also

ಆನ್‌ಲೈನ್ ಗೇಮಿಂಗ್ ಪ್ರಚಾರ-ನಿಯಂತ್ರಣ ಕಾಯಿದೆ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ: ಆ.30ಕ್ಕೆ ವಿಚಾರಣೆ

Spread the love ಬೆಂಗಳೂರು: ಹಣವನ್ನು ಪಣಕ್ಕಿಟ್ಟು ಆಡುವಂತಹ ಆನ್‌ಲೈನ್​ ಗೇಮ್​ಗಳಿಗೆ ನಿಷೇಧ ಹೇರುವುದಕ್ಕೆ ಅವಕಾಶ ಕಲ್ಪಿಸುವ ಆನ್‌ಲೈನ್ ಗೇಮಿಂಗ್ ಪ್ರಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ