Breaking News

ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ : ಇಂದು ಹೈಕೋರ್ಟ್ ನಲ್ಲಿ ‘ಸಿಎಂ ಸಿದ್ದರಾಮಯ್ಯ’ ಭವಿಷ್ಯ ನಿರ್ಧಾರ..!

Spread the love

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದ ರಾಜ್ಯಪಾಲರ ನಡೆ ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಇಂದು ನಡೆಸಲಿದ್ದು, ಸಿಎಂ ಸಿದ್ದರಾಮಯ್ಯ ಭವಿಷ್ಯ ನಿರ್ಧಾರವಾಗಲಿದೆ .

ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಆಗಸ್ಟ್ 29 ರಂದು ನಡೆದಿದ್ದು, ಸಿಎಂ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಸುದೀರ್ಘ ವಾದ ಮಂಡನೆ ಮಾಡಿದರು. ಈ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪರ ವಕೀಲ ತುಷಾರ್ ಮೆಹ್ತಾ ಶನಿವರ ವಾದ ಮಂಡನೆ ಮಾಡುವುದಾಗಿ ಕೋರ್ಟ್ ಗೆ ತಿಳಿಸಿದರು.

ಇದಕ್ಕೆ ಕೋರ್ಟ್ ಒಪ್ಪಿಗೆ ಸೂಚಿಸಿದೆ.ಈ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆಯನ್ನು ಆಗಸ್ಟ್ 31ಕ್ಕೆ ಬೆಳಿಗ್ಗೆ 10:30ಕ್ಕೆ ಮುಂದೂಡಿ ಹೈಕೋರ್ಟ್ ಆದೇಶ ಹೊರಡಿಸಿತ್ತು. ಅಲ್ಲದೇ ಈ ಹಿಂದಿನ ಮಧ್ಯಂತರ ಆದೇಶವನ್ನೂ ಮುಂದುವರೆಸಿದೆ.ರಾಜ್ಯಪಾಲರ ನಡೆ ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಇಂದು ನಡೆಸಲಿದ್ದು, ಸಿಎಂ ಸಿದ್ದರಾಮಯ್ಯ ಭವಿಷ್ಯ ನಿರ್ಧಾರವಾಗಲಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ