Breaking News

ರಾಜ್ಯಪಾಲರ ಕಚೇರಿ ಬಳಸಿಕೊಂಡು, ಬಹುಮತದಿಂದ ಆಯ್ಕೆಯಾದ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಹುನ್ನಾರ:CM&DCM

Spread the love

ಬೆಂಗಳೂರು, ಆಗಸ್ಟ್‌ 31: ರಾಜ್ಯಪಾಲರ ಕಚೇರಿ ಬಳಸಿಕೊಂಡು, ಬಹುಮತದಿಂದ ಆಯ್ಕೆಯಾದ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಹುನ್ನಾರ ಮಾಡಲಾಗುತ್ತಿದೆ. ಕರ್ನಾಟಕ ತಾನು ಬೆಳೆದು ಅನೇಕ ರಾಜ್ಯಗಳ ಬೆಳವಣಿಗೆಗೂ ಸಹಾಯ ಮಾಡುತ್ತಿದೆ. ಇಂತಹ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ರಾಜ್ಯಪಾಲರ ಕಚೇರಿಯಿಂದ ಆಗಬಾರದು ಎಂಬುದಷ್ಟೇ ನಮ್ಮ ಕಾಳಜಿ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು.

 

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಜ್ಯಪಾಲರ ಹುದ್ದೆ ಸಾಂವಿಧಾನ ನೀಡಿರುವ ಪೀಠ. ರಾಜ್ಯಪಾಲರ ಕಚೇರಿ ಒಂದು ರಾಜಕೀಯ ಪಕ್ಷದ ಕಚೇರಿ ಆಗಬಾರದು. ಸಂವಿಧಾನಿಕವಾಗಿ ಈ ಹುದ್ದೆಗೆ ಇರುವ ಘನತೆದೆ ಧಕ್ಕೆ ಬರುವಂತೆ ನಡೆದುಕೊಳ್ಳಬಾರದು ಎಂಬುದು ನಮ್ಮ ಅಭಿಲಾಷೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ರಾಜ್ಯಪಾಲರು ನಮಗೆ ಟೀ, ಕಾಫಿ ಮತ್ತು ಉಪಹಾರವನ್ನು ಕೊಟ್ಟು ಉಪಚರಿಸಿದರು. ಎಲ್ಲದಕ್ಕಿಂತ ಮುಖ್ಯವಾಗಿ ನಿಮಗೆ ನ್ಯಾಯ ನೀಡುತ್ತೇವೆ ಎಂದು ಭರವಸೆ ನೀಡಿದರು. ಲೋಕಾಯುಕ್ತ ಎಸ್ ಐಟಿ ಅವರು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರಮಂತ್ರಿ ಕುಮಾರಸ್ವಾಮಿ ಹಾಗೂ ಮೂರು ಜನ ಮಾಜಿ ಮಂತ್ರಿಗಳ ಅಕ್ರಮಗಳ ವಿರುದ್ಧ ನ್ಯಾಯಾಲಯದ ಸೂಚನೆಯಂತೆ ಸಂಪೂರ್ಣ ತನಿಖೆ ನಡೆಸಿ ವರದಿ ನೀಡಿದ್ದಾರೆ. ಆದರೂ ಏನೂ ಕ್ರಮ ತೆಗೆದುಕೊಂಡಿಲ್ಲ. ನಮ್ಮ ಮುಖ್ಯಮಂತ್ರಿಗಳ ಮೇಲೆ ಕ್ರಮ ಕೈಗೊಳ್ಳಲು ಮುಂದಾಗುವ ರಾಜ್ಯಪಾಲರು, ಅವರ ಮೇಲೆ ಏಕೆ ಕ್ರಮ ತೆಗೆದುಕೊಂಡಿಲ್ಲ. ನೀವು ತಾರತಮ್ಯ ಎಸಗಿ ನಮ್ಮ ವಿರುದ್ಧ ಕೆಲಸ ಮಾಡಿದ್ದಾರಲ್ಲವೇ ಎಂದು ಹೇಳಿದರು.


Spread the love

About Laxminews 24x7

Check Also

ಆಟೊ ಬುಕ್ ಮಾಡಿ ಬಳಿಕ ರದ್ದು ಮಾಡಿದಕ್ಕೆ ಯುವತಿ ಹಿಂಬಾಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಚಾಲಕ: ಬಂಧನ

Spread the love ಬೆಂಗಳೂರು: ಆ್ಯಪ್​ನಲ್ಲಿ ಆಟೋ ಬುಕ್ ಮಾಡಿ ಬಳಿಕ ರದ್ದು ಮಾಡಿದ್ದಕ್ಕೆ ಅಸಮಾಧಾನಗೊಂಡು ಯುವತಿಯನ್ನ ಹಿಂಬಾಲಿಸಿ ಅವಾಚ್ಯ ಶಬ್ಧಗಳಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ