Breaking News

ಗೋಕಾಕ: ‘ಈದ್ ಮಿಲಾದ ಮತ್ತು ಗಣೇಶ್ ಹಬ್ಬವನ್ನು ಎಲ್ಲರೂ ಒಂದಾಗಿ ಭಾವೈಕ್ಯ ಮತ್ತು ಶಾಂತಿಯುತವಾಗಿ ಆಚರಿಸೋಣ’ ಎಂದ ತಹಶೀಲ್ದಾರ್ ಮೋಹನ ಭಸ್ಮೆ

Spread the love

ಗೋಕಾಕ: ‘ಈದ್ ಮಿಲಾದ ಮತ್ತು ಗಣೇಶ್ ಹಬ್ಬವನ್ನು ಎಲ್ಲರೂ ಒಂದಾಗಿ ಭಾವೈಕ್ಯ ಮತ್ತು ಶಾಂತಿಯುತವಾಗಿ ಆಚರಿಸೋಣ’ ಎಂದು ತಹಶೀಲ್ದಾರ್ ಮೋಹನ ಭಸ್ಮೆ ಕರೆ ನೀಡಿದರು.

ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ತಾಲ್ಲೂಕು ಆಡಳಿತ, ಪೊಲೀಸ್ ಇಲಾಖೆ ಹಾಗೂ ನಗರಸಭೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಶಾಂತಿ ಪಾಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

 

‘ಗಣೇಶ ಚತುರ್ಥಿಯಲ್ಲಿ ಹಸಿರು ಪಟಾಕಿಗಳನ್ನು ಬಳಸಬೇಕು. ಸಾರ್ವಜನಿಕರ ಭಾವನೆಗೆ ಧಕ್ಕೆಯಾಗದಂತೆ ಹಬ್ಬಗಳನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಹಬ್ಬದ ಸಂದರ್ಭದಲ್ಲಿ ಅಹಿತಕರ ಘಟನೆ ನಡೆಯದಂತೆ ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬವನ್ನು ಆಚರಿಸೋಣ’ ಎಂದರು.

ಶಹರ ಠಾಣೆ ಎಸ್‌ಐ ಕೆ.ವಾಲಿಕರ ಮಾತನಾಡಿ, ‘ನಗರದಲ್ಲಿ ಸ್ಥಾಪಿಸುವ ಗಣೇಶ್ ಪೆಂಡಾಲ್‌ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು. ಅಗ್ನಿ ಅವಘಡ ಸಂಭವಿಸದಂತೆ ಮುಂಜಾಗ್ರತಾ ಕ್ರಮ ವಹಿಸಬೇಕು. ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದಲ್ಲಿ ಕಾನೂನು ಸುವ್ಯವಸ್ಥೆ ಧಕ್ಕೆ ತರುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.

ಪೌರಾಯುಕ್ತ ರಮೇಶ ಜಾದವ, ಎಂ.ಎಚ್.ಗಜಾಕೋಶ, ಎಸ್.ಪಿ.ವರಾಳೆ, ವಿನೋದ ಪಾಟೀಲ, ಅಗ್ನಿ ಶಾಮಕ ಠಾಣಾಧಿಕಾರಿ ಎಸ್.ಎನ್.ಮೆಳವಂಕಿ ಇದ್ದರು.


Spread the love

About Laxminews 24x7

Check Also

ನಮಗೆ ಇ.ಡಿ ಸಮನ್ಸ್ ಮೂಲಕ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

Spread the loveಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ನೀಡಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ