Breaking News

ಸವದತ್ತಿ: 99 ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ಶಿಷ್ಯವೇತನ

Spread the love

ವದತ್ತಿ: ಇಲ್ಲಿನ ಗುರ್ಲಹೊಸೂರಿನ ಚಿದಂಬರೇಶ್ವರ ದೇವಸ್ಥಾನದಲ್ಲಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದಿಂದ ಸುಜ್ಞಾನನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮ ಶುಕ್ರವಾರ ಜರುಗಿತು.

ಪಿಐ ಧರ್ಮಾಕರ ಧರ್ಮಟ್ಟಿ ಮಾತನಾಡಿ, ಮಹಿಳೆಯರ ಆರ್ಥಿಕಾಭಿವೃದ್ಧಿಗೆ ಮಾತ್ರವಲ್ಲದೇ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೂ ಧರ್ಮಸ್ಥಳ ಸಂಘ ಆರ್ಥಿಕ ನೆರವು ನೀಡುತ್ತಿರುವ ಕಾರ್ಯ ಶ್ಲಾಘನೀಯ.

ತಾಲ್ಲೂಕಿನ 99 ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ಶಿಷ್ಯವೇತನ ನೀಡಿ ಬಡ ಮಕ್ಕಳನ್ನು ಶೈಕ್ಷಣಿಕವಾಗಿ ಮೇಲೆತ್ತುವ ಕಾರ್ಯ ಮಾದರಿಯಾಗಿದೆ ಎಂದರು.

ವೇದಿಕೆಯಲ್ಲಿ 99 ಮಂದಿ ವಿದ್ಯಾರ್ಥಿ ಸುಜ್ಞಾನನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ಹಾಗೂ ಶಿಷ್ಯವೇತನದಲ್ಲಿ ಶಿಕ್ಷಣ ಪಡೆದ 18 ವಿದ್ಯಾರ್ಥಿಗಳಿಗೆ ಪೂಜ್ಯರ ಆಶೀರ್ವಾದ ಪತ್ರ ವಿತರಿಸಲಾಯಿತು.

ಜಿಲ್ಲಾ ನಿರ್ದೇಶಕ ಎಚ್.ಆರ್. ಲವಕುಮಾರ, ಸದಾನಂದ ದೀಕ್ಷಿತರು, ಶ್ರೀಧರ ಅಸಂಗಿಹಾಳ, ಕಾವೇರಿ ಮಾಸ್ತಿಹೊಳಿ ಮತ್ತಿತರರು ಇದ್ದರು.


Spread the love

About Laxminews 24x7

Check Also

ಚಿಕ್ಕೋಡಿ ನಗರದಲ್ಲಿರುವ ಸಂಸದರ ಕಚೇರಿಯಲ್ಲಿ ಇಂದು 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣವನ್ನು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ನೆರವೇರಿಸಿದರು.

Spread the love ಚಿಕ್ಕೋಡಿ ನಗರದಲ್ಲಿರುವ ಸಂಸದರ ಕಚೇರಿಯಲ್ಲಿ ಇಂದು 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣವನ್ನು ಸಂಸದೆ ಪ್ರಿಯಾಂಕಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ