Breaking News

ಮೆಡಿಕಲ್ ಸೀಟು ಸಿಗದ ಕಾರಣಕ್ಕೆ ಮನನೊಂದು ಯುವತಿ ಆತ್ಮಹತ್ಯೆ

Spread the love

ಲಬುರಗಿ: ಮೆಡಿಕಲ್ ಸೀಟು ಸಿಗದ ಕಾರಣಕ್ಕೆ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಅಫಜಲಪುರ ತಾಲೂಕಿನ ದುದ್ದಣಗಿ ಗ್ರಾಮ ಶ್ವೇತಾ ಅಪ್ಪಾಸಾಬ್ ಗುಣಾರಿ(20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ನೀಟ್ ಪರೀಕ್ಷೆ ಬರೆದಿದ್ದ ಅವರು ಮೆಡಿಕಲ್ ಸೀಟು ಸಿಗುವ ನಿರೀಕ್ಷೆಯಲ್ಲಿದ್ದರು.

ಆದರೆ, ವೈದ್ಯಕೀಯ ಕೋರ್ಸ್ ಸೇರಲು ಸೀಟು ಸಿಗದ ಕಾರಣ ಭಾನುವಾರ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಅಫಜಲಪುರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ