Breaking News

ಉತ್ತರ ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ, ಕೆಲವು ಗ್ರಾಮಗಳಿಗೆ ಜಲದಿಗ್ಬಂಧನ

Spread the love

ತ್ತರ ಕರ್ನಾಟಕ ಭಾಗದಲ್ಲಿ ಮತ್ತೆ ವರುಣನ ಆರ್ಭಟ ಜೋರಾಗಿದ್ದು, ಭಾರಿ ಮಳೆಗೆ ಜಿಲ್ಲೆಯ ಗುರುಮಟ್ಕಲ್‌ ತಾಲ್ಲೂಕಿನ ನಂದೆಪಲ್ಲಿ ಸೇತುವೆ ಸಂಪೂರ್ಣವಾಗಿ ಜಲಾವೃತಗೊಂಡಿದೆ.

ಜಿಲ್ಲೆಯಲ್ಲಿ ಕೆಲವು ದಿನಗಳಿಂದ ವರುಣನ ಆರ್ಭಟ ಜೋರಾಗಿದ್ದು, ತೆಲಂಗಾಣಕ್ಕೆ ಸಂಪರ್ಕ ಕಲ್ಪಿಸುವ ನಂದೆಪಲ್ಲಿ ಸೇತುವೆ ಮುಳುಗಡೆಯಾಗಿದ್ದು, ಸಂಚಾರ ಸಂಪರ್ಕ ಕಡಿತಗೊಂಡು ಸಾರ್ವಜನಿಕರು ಪರದಾಡುವಂತಾಗಿದೆ.

 

ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಮೋಟನಹಳ್ಳಿ ಗ್ರಾಮದಲ್ಲಿ ಸುಮಾರು 15ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ರಾತ್ರಿಯಿಡೀ ಜಾಗರಣೆ ಮಾಡುವಂತಾಗಿದೆ.

ಅದೇ ರೀತಿ ಹುಬ್ಬಳ್ಳಿಯಲ್ಲೂ ಭಾರಿ ಮಳೆಯಾಗುತ್ತಿದ್ದು, ಕಮಲಾವತಿ ನದಿ ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಕೆಲವು ಗ್ರಾಮಗಳು ಜಲದಿಗ್ಬಂಧನವಾಗಿವೆ. ಕಲಬುರಗಿ ಜಿಲ್ಲೆಯ ಚಿಂಚೋಳಿಯ ಬೆನಕನಹಳ್ಳಿ ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ತೆಲಂಗಾಣಕ್ಕೆ ಸಂಪರ್ಕ ಕಲ್ಪಿಸುವ ಮಿರಿಯಾಣ ಸೇತುವೆ ಮುಳುಗಡೆಯಾಗಿದೆ.

ಕಳೆದ ಕೆಲವು ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಮೂರ್ನಾಲ್ಕು ದಿನಗಳಿಂದ ಅಬ್ಬರಿಸುತ್ತಿದ್ದು, ಅಕ್ಷರಸಹ ಜನರು ಪರದಾಡುವಂತಾಗಿದೆ. ಜಮೀನುಗಳಿಗೆ ನೀರು ನುಗ್ಗಿ ಬೆಳೆಗಳು ನಾಶವಾಗಿವೆ.


Spread the love

About Laxminews 24x7

Check Also

ಹಬ್ಬದ ಅವಧಿಯಲ್ಲಿ ಗುರಿ ಮೀರಿದ ಸಾಧನೆ; 1,100 ಮೆಟ್ರಿಕ್ ಟನ್ ನಂದಿನಿ ಸಿಹಿ ಉತ್ಪನ್ನ ಮಾರಾಟ: ಸಚಿವ ಕೆ.ವೆಂಕಟೇಶ್

Spread the love ಬೆಂಗಳೂರು: ಈ ಬಾರಿ ಹಬ್ಬದ ಅವಧಿಯಲ್ಲಿ ಗುರಿ ಮೀರಿ ನಂದಿನಿ ಸಿಹಿ ತಿಂಡಿ ಉತ್ಪನ್ನಗಳ ಮಾರಾಟವಾಗಿದೆ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ