Breaking News

ಕಿಚ್ಚನ ಹುಟ್ಟು ಹಬ್ಬಕ್ಕೆ ಅಭಿಮಾನಿಗಳಿಗೆ ಗಿಫ್ಟ್ : ಹೊಸ ಸಿನಿಮಾ ಘೋಷಣೆ ಮಾಡಿದ ನಟ ಸುದೀಪ್

Spread the love

ಬೆಂಗಳೂರು : ಹುಟ್ಟು ಹಬ್ಬದ ದಿನವೇ ನಟ ಕಿಚ್ಚ ಸುದೀಪ್ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಹೌದು, ನಟ ಸುದೀಪ್ ‘ಬಿಲ್ಲಾ ರಂಗಾ ಭಾಷಾ ಸಿನಿಮಾ’ ಘೋಷಣೆ ಮಾಡಿದ್ದು, ಅಭಿಮಾನಿಗಳಲ್ಲಿ ಬಹಳ ಕುತೂಹಲ ಮೂಡಿದೆ.

ಬಿಲ್ಲಾ ರಂಗ ಭಾಷಾ ಸಿನಿಮಾದ ಟೈಟಲ್ ಲೋಗೋ ಮತ್ತು ಪರಿಕಲ್ಪನೆಯ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ನಟ ಸುದೀಪ್ ಹಂಚಿಕೊಂಡಿದ್ದಾರೆ.

BREAKING : ಕಿಚ್ಚನ ಹುಟ್ಟು ಹಬ್ಬಕ್ಕೆ ಅಭಿಮಾನಿಗಳಿಗೆ ಗಿಫ್ಟ್ : ಹೊಸ ಸಿನಿಮಾ ಘೋಷಣೆ ಮಾಡಿದ ನಟ ಸುದೀಪ್ |Video

ವಿಕ್ರಾಂತ್ ರೋಣ ನಿರ್ದೇಶಕರಿಂದ ಬಿಲ್ಲಾ ರಂಗ ಭಾಷಾ ಸಿನಿಮಾ ತಯಾರಾಗುತ್ತಿದೆ. ಒಂದಾನೊಂದು ಕಾಲದಲ್ಲಿ ಕ್ರಿ.ಶಕ 2209ರಲ್ಲಿ ಎಂದು ಆರಂಭವಾಗುವ ವಿಡಿಯೋದಲ್ಲಿ ಬಿಲ್ಲಾ ರಂಗ ಭಾಷಾ ಎಂಬ ಮೂವರ ಕಥೆಯ ಬಗ್ಗೆ ವಿಡಿಯೋದಲ್ಲಿ ಮಾಹಿತಿ ನೀಡಲಾಗಿದೆ. ಈ ಸಿನಿಮಾಗೆ ಅನೂಪ್ ಬಂಡಾರಿ ಕಥೆ ಬರೆದು ನಿರ್ದೇಶನ ಮಾಡುತ್ತಿದ್ದು, ಸಿನಿಮಾ ಯಾವ ಲೆವೆಲ್ ಗೆ ಸದ್ದು ಮಾಡುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಇಂದು ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.

ಮ್ಯಾಕ್ಸ್ ಸಿನಿಮಾದ ಬಳಿಕ ನಟ ಸುದೀಪ್ ಈ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ತಾರಾಗಣದ ಬಗ್ಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ