Breaking News

ಶೀಘ್ರವೇ ‘ಗೃಹಲಕ್ಷ್ಮಿ ಯೋಜನೆ’ಯ ಜುಲೈ, ಆಗಸ್ಟ್ ತಿಂಗಳ ಹಣ ಖಾತೆಗೆ ಜಮಾ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Spread the love

ಚಿತ್ರದುರ್ಗ : ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಶೀಘ್ರವೇ ಮನೆ ಯಜಮಾನಿಯರ ಖಾತೆಗೆ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಚಿತ್ರದುರ್ಗದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಇದುವರೆಗೆ 11 ತಿಂಗಳ ಮೊತ್ತ ಸಂದಾಯವಾಗಿದ್ದು, ಶೀಘ್ರವೇ ಜುಲೈ ಹಾಗೂ ಆಗಸ್ಟ್ ತಿಂಗಳ ಹಣವೂ ಸಂದಾಯವಾಗಲಿದೆ.

ಕೆಲವೊಂದು ತಾಂತ್ರಿಕ ಕಾರಣಗಳಿಂದ ಏಕಕಾಲದಲ್ಲಿ ಒಟ್ಟಿಗೆ ಹಣ ಸಂದಾಯವಾಗುತ್ತಿಲ್ಲ. ಒಂದು ವರ್ಷದಲ್ಲಿ 25 ಸಾವಿರ ಕೋಟಿ ರೂ ಮೊತ್ತವನ್ನು ಯೋಜನೆಗೆ ವ್ಯಯಿಸಲಾಗಿದೆ ಎಂದರು.

ಬಿಜೆಪಿಗರ ಕುತಂತ್ರಕ್ಕೆ ಶೀಘ್ರವೇ ಉತ್ತರ

ಕರ್ನಾಟಕದಲ್ಲಿ ಉತ್ತಮ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸ್ಥಿರವಾದ ಸರ್ಕಾರವನ್ನು ಅಸ್ಥಿರಗೊಳಿಸುವುದೇ ಬಿಜೆಪಿ ನಾಯಕರ ಉದ್ದೇಶ. ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಏನೆಲ್ಲಾ ಸರ್ಕಸ್ ನಡೆಸುತ್ತಿದೆ ಎಂಬುದು ರಾಜ್ಯದ ಜನರಿಗೆ ಗೊತ್ತಿದೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಕೋವಿಡ್ ಕಾಲದ ಭ್ರಷ್ಟಾಚಾರ ಬಯಲು

ಕೋವಿಡ್ ವೇಳೆ ಬಿಜೆಪಿ ಸಚಿವರು ಮಾಡಿದ್ದ ಭ್ರಷ್ಟಾಚಾರ ಇಡೀ ರಾಜ್ಯಕ್ಕೆ ಗೊತ್ತಿದೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ, ಮಾಸ್ಕ್, ಆಕ್ಸಿಜನ್, ಬೆಡ್ ಖರೀದಿ ಇನ್ನಿತರ ಪರಿಕರಗಳ ಖರೀದಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದರು. ಇದೀಗ ಕೋವಿಡ್ ಕಾಲದ ಭ್ರಷ್ಟಾಚಾರ ಕುರಿತು ರಚಿಸಲಾಗಿದ್ದ ತನಿಖಾ ಸಮಿತಿ ಸರ್ಕಾರಕ್ಕೆ ವರದಿ ನೀಡಿದ್ದು, ಈ ಕುರಿತು ಶೀಘ್ರವೇ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದರು.


Spread the love

About Laxminews 24x7

Check Also

ಆನ್‌ಲೈನ್ ಗೇಮಿಂಗ್ ಪ್ರಚಾರ-ನಿಯಂತ್ರಣ ಕಾಯಿದೆ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ: ಆ.30ಕ್ಕೆ ವಿಚಾರಣೆ

Spread the love ಬೆಂಗಳೂರು: ಹಣವನ್ನು ಪಣಕ್ಕಿಟ್ಟು ಆಡುವಂತಹ ಆನ್‌ಲೈನ್​ ಗೇಮ್​ಗಳಿಗೆ ನಿಷೇಧ ಹೇರುವುದಕ್ಕೆ ಅವಕಾಶ ಕಲ್ಪಿಸುವ ಆನ್‌ಲೈನ್ ಗೇಮಿಂಗ್ ಪ್ರಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ