Breaking News

ದರ್ಶನ್‌ ತಪ್ಪು ಮಾಡಿ ಜೈಲಿಗೆ ಹೋಗಿದ್ದಾರೆ : ಜಮೀರ್

Spread the love

ಹಾವೇರಿ,ಸೆ.3- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ತಪ್ಪು ಮಾಡಿದ ಕಾರಣಕ್ಕಾಗಿ ಜೈಲಿಗೆ ಹೋಗಿದ್ದಾರೆ. ಇದರಲ್ಲಿ ನನ್ನ ಹೆಸರನ್ನು ಏಕೆ ಥಳಕು ಹಾಕಲಾಗುತ್ತಿದೆ ಎಂದು ವಸತಿ ಸಚಿವ ಜಮೀರ್‌ ಅಹಮದ್‌ಖಾನ್‌ ಆಕ್ಷೇಪ ವ್ಯಕ್ತಪಡಿಸಿದರು.

 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದರ್ಶನ್‌ ನನ್ನ ಆತೀಯ ಸ್ನೇಹಿತರು. ಅದರಲ್ಲಿ ಎರಡು ಮಾತಿಲ್ಲ. ಆದರೆ ಕಾನೂನು ಪ್ರಕಾರ, ಏನು ನಡೆಯಬೇಕೋ ಅದೇ ನಡೆಯುತ್ತದೆ. ಮಾಧ್ಯಮಗಳು ಉದ್ದೇಶಪೂರಕವಾಗಿ ನನ್ನ ಹೆಸರನ್ನು ಪ್ರಸ್ತಾಪ ಮಾಡುತ್ತಿದೆ. ಇದಕ್ಕೂ, ನನಗೂ ಯಾವುದೇ ಸಂಬಂಧವಿಲ್ಲ ಎಂದರು.

ಜಮೀರ್‌ ಅಹಮದ್‌ ಖಾನ್‌ ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿರುವುದರಿಂದ ದರ್ಶನ್‌ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿದೆ ಎಂಬ ವ್ಯಾಖ್ಯಾನಗಳಿವೆ. ಈ ಹಿಂದೆ ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿ ದರ್ಶನ್‌ ರೌಡಿಶೀಟರ್‌ಗಳ ಜೊತೆ ಸೇರಿ ರಾಜಾತಿಥ್ಯ ಪಡೆದುಕೊಂಡು ಫೋಟೊಗಳು ವೈರಲ್‌ ಆಗಿದ್ದವು.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ