Breaking News

ಕಲಘಟಗಿ ತಾಲ್ಲೂಕಿನಲ್ಲಿ ಧಾರಾಕಾರ ಮಳೆ

Spread the love

ಲಘಟಗಿ: ಪಟ್ಟಣ ಸೇರಿದಂತೆ ತಾಲ್ಲೂಕಿನಲ್ಲಿ ಮಂಗಳವಾರ ಧಾರಾಕಾರ ಮಳೆ ಸುರಿಯಿತು. ಮಳೆಯಿಂದಾಗಿ ಹೊಲಗಳಲ್ಲಿ ನೀರು ನಿಂತಿದ್ದು, ಬೆಳೆ ಹಾನಿಯ ಆತಂಕ ರೈತರನ್ನು ಕಾಡುತ್ತಿದೆ.

ರಸ್ತೆ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದಿದ್ದರಿಂದ ವಾಹನ ಸವಾರರು ಪರದಾಡಬೇಕಾಯಿತು.

ಪಟ್ಟಣದಲ್ಲಿ ಮಂಗಳವಾರ ನಡೆದ ಸಂತೆಯಲ್ಲಿ ಜನರು ಮಳೆಯಲ್ಲೇ ತರಕಾರಿ ಖರೀದಿಸಿದರು.

ಪಟ್ಟಣದ ಬಸ್ ನಿಲ್ದಾಣದ ಹಿಂಭಾಗದ ಚರ್ಚ್‌ ರಸ್ತೆ ಮೇಲೆ ಚರಂಡಿ ನೀರು ಹಾಗೂ ಮಳೆ ನೀರು ಹರಿದಿದ್ದರಿಂದ ಎಲ್ಲೆಡೆ ಕೊಳಚೆ ಸಂಗ್ರಹವಾಗಿತ್ತು. ಇದರಲ್ಲೇ ವ್ಯಾಪಾರಸ್ಥರು ಹಾಗೂ ಜನರು ಸಂಚರಿಸಬೇಕಾಯಿತು.

‘ಚರಂಡಿಯಲ್ಲಿ ಹೂಳು ತುಂಬಿದ್ದು, ಮಳೆ ಬಂದಾಗ ಚರಂಡಿ ತುಂಬಿ ಹರಿಯುತ್ತದೆ. ಪಟ್ಟಣ ಪಂಚಾಯಿತಿ ಅಧಿಕಾರಿಗಳು ಚರಂಡಿಯಲ್ಲಿನ ಹೂಳು ತೆರವಿಗೆ ಕ್ರಮ ಕೈಗೊಳ್ಳಬೇಕು’ ಎಂದು ಪಟ್ಟಣದ ಮುಖಂಡ ಶಶಿಕುಮಾರ್ ಕಟ್ಟಿಮನಿ ಒತ್ತಾಯಿಸಿದರು.


Spread the love

About Laxminews 24x7

Check Also

ಆಟೊ ಬುಕ್ ಮಾಡಿ ಬಳಿಕ ರದ್ದು ಮಾಡಿದಕ್ಕೆ ಯುವತಿ ಹಿಂಬಾಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಚಾಲಕ: ಬಂಧನ

Spread the love ಬೆಂಗಳೂರು: ಆ್ಯಪ್​ನಲ್ಲಿ ಆಟೋ ಬುಕ್ ಮಾಡಿ ಬಳಿಕ ರದ್ದು ಮಾಡಿದ್ದಕ್ಕೆ ಅಸಮಾಧಾನಗೊಂಡು ಯುವತಿಯನ್ನ ಹಿಂಬಾಲಿಸಿ ಅವಾಚ್ಯ ಶಬ್ಧಗಳಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ