Breaking News

ಇಬ್ಬರ ಬಂಧನ, 30 ಜಾನುವಾರು ರಕ್ಷಣೆ

Spread the love

ದ್ದೂರು: ಹಿಂದೂಪರ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ಹಾಗೂ ತಂಡ ಪಟ್ಟಣದಲ್ಲಿ ಬುಧವಾರ ಸರಕು ವಾಹನೊಂದನ್ನು ತಡೆದು ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ 30ಕ್ಕೂ ಹೆಚ್ಚು ಜಾನುವಾರುಗಳನ್ನು ರಕ್ಷಿಸಿ ವಾಹನ ಸಹಿತ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

ನಸುಕಿನ 5.45 ರ ಸಂದರ್ಭದಲ್ಲಿ ಐಷರ್ ಸರಕು ಸಾಗಣೆ ವಾಹನದಲ್ಲಿ ಮೈಸೂರು ಕಡೆಯಿಂದ ಬೆಂಗಳೂರು ಕಡೆಗೆ ಕಸಾಯಿಖಾನೆಗೆ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯನ್ನಾಧರಿಸಿ ಪುನೀತ್ ಕೆರೆಹಳ್ಳಿ ಹಾಗೂ ಅವರ ತಂಡದವರು ವಾಹನವನ್ನು ಪಟ್ಟಣದ ಪ್ರವಾಸಿ ಮಂದಿರದ ಬಳಿ ನಿಲ್ಲಿಸಿದ್ದರು.

 

ಪೊಲೀಸ್ ಠಾಣೆಗೆ ವಿಷಯ ತಿಳಿಸಿದಾಗ ಸಿಪಿಐ ಶಿವಕುಮಾರ್ ಹಾಗೂ ಸಿಬ್ಬಂದಿ ಬಂದು ವಾಹನವನ್ನು ವಶಕ್ಕೆ ಪಡೆದು, ವಾಹನದ ಚಾಲಕ ಮನ್ಸೂರ್ ಹಾಗೂ ಕ್ಲೀನರ್ ಲೋಕೇಶ್ ಎಂಬುವರನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಪ್ರಕರಣ ದಾಖಲಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ