Breaking News

ಸೆ.22 ರಂದು ನಿಗದಿಯಾದ ‘PSI’ ಪರೀಕ್ಷೆ ದಿನಾಂಕ ಮುಂದೂಡಿಕೆ ಇಲ್ಲ : ಸ್ಪಷ್ಟನೆ ನೀಡಿದ ‘KEA’

Spread the love

ಬೆಂಗಳೂರು : ಇದೇ ಸೆಪ್ಟೆಂಬರ್ 22ರಂದು ನಡೆಯಲಿರುವ ಪಿಎಸ್‌ಐ ನೇಮಕಾತಿ ಪರೀಕ್ಷೆ ದಿನಾಂಕವನ್ನು ಯಾವುದೇ ಕಾರಣಕ್ಕೂ ಮುಂದೂಡಿಕೆ ಮಾಡುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸ್ಪಷ್ಟಪಡಿಸಿದೆ.

ಈ ಕುರಿತು KEA ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಮಾಹಿತಿ ತಿಳಿಸಿದ್ದು, ಗೃಹ ಸಚಿವರು ಹಾಗೂ ಡಿಜಿಪಿಗೂ ಪತ್ರ ಬರೆಯಲಾಗಿದೆ.

BREAKING : ಸೆ.22 ರಂದು ನಿಗದಿಯಾದ 'PSI' ಪರೀಕ್ಷೆ ದಿನಾಂಕ ಮುಂದೂಡಿಕೆ ಇಲ್ಲ : ಸ್ಪಷ್ಟನೆ ನೀಡಿದ 'KEA'

ಸೂಕ್ಷ್ಮ ಕೇಂದ್ರಗಳಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜಿಸುವ ಬಗ್ಗೆಯೂ ಚರ್ಚೆ ಆಗಿದೆ ಎಂದು ಅವರು ವಿವರಿಸಿದ್ದಾರೆ. ದಾವಣಗೆರೆ, ಧಾರವಾಡ, ಕಲಬುರಗಿ, ಶಿವಮೊಗ್ಗ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಪರೀಕ್ಷೆ ನಡೆಯಲಿದೆ. ದೈಹಿಕ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವ 66,990 ಮಂದಿ ಲಿಖಿತ ಪರೀಕ್ಷೆ ಬರೆಯಲಿದ್ದು, ಈಗಿನಿಂದಲೇ ಸಿದ್ಧತೆ ನಡೆಸಲಾಗಿದೆ ಎಂದು ಪ್ರಸನ್ನಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈಗಾಗಲೇ ರಾಜಧಾನಿ ಬೆಂಗಳೂರು ಸೇರಿದಂತೆ ಆರು ಜಿಲ್ಲೆಗಳ ಒಟ್ಟು 164 ಕೇಂದ್ರಗಳಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿ ಪರೀಕ್ಷೆಯನ್ನು ಸೆ.22ರಂದು ನಡೆಸಲು ತಯಾರಿ ನಡೆದಿದ್ದು, ಹೆಚ್ಚಿನ ನಿಗಾ ಇಡಲು ಪೊಲೀಸ್ ಇಲಾಖೆಯ ನೆರವು ಕೂಡ ಕೋರಲಾಗಿದೆ.ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಪರೀಕ್ಷೆ ಮುಂದೂಡುವಂತೆ ಒತ್ತಡ ಹೇರುವ ಪ್ರಯತ್ನ ನಡೆಸಿದ್ದು, ಅದಕ್ಕೆ ಯಾರೂ ಕಿವಿಗೊಡಬಾರದು ಮನವಿ ಮಾಡಿದ್ದಾರೆ ಎಂದರು.

ಈಗಾಗಲೇ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಒಮ್ಮೆ ಈ ಪರೀಕ್ಷೆ ಮುಂದೂಡಲಾಗಿದೆ. ಪುನಃ ಹಾಗೆಯೇ ಮಾಡಿದರೆ ಪರೀಕ್ಷೆ ನಡೆಸುವುದು ಯಾವಾಗ? ಇಷ್ಟಕ್ಕು ಯಾವುದಾದರು ಒಂದು ಪರೀಕ್ಷೆ ಇದ್ದೇ ಇರುತ್ತದೆ. ಹಾಗಂತ ಪರೀಕ್ಷೆ ಇಲ್ಲದ ದಿನ ಹುಡುಕುವುದು ಕೂಡ ಕಷ್ಟ. ನಾವು ಈ ದಿನಾಂಕವನ್ನು ಮೂರು ತಿಂಗಳ ಮೊದಲೇ ತೀರ್ಮಾನಿಸಿದ್ದು, ಆ ಪ್ರಕಾರ ಪರೀಕ್ಷೆ ನಡೆಸುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ