Breaking News

ಸೆ.22ಕ್ಕೆ ಬೆಳಗಾವಿಯಲ್ಲಿ ಲಿಂಗಾಯತ ಪಂಚಮಸಾಲಿ ವಕೀಲರ ಬೃಹತ್ ಸಮಾವೇಶ

Spread the love

ಚಿಕ್ಕೋಡಿ: ಪಂಚಮಸಾಲಿ ಲಿಂಗಾಯತ ಸಮಾಜಕ್ಕೆ 2ಎ ಮೀಸಲಾತಿಗೆ ಕಾನೂನು ಮೂಲಕ ಹೋರಾಟ ನಡೆಸಲು ಪಂಚಮಸಾಲಿ ಲಿಂಗಾಯತ ಹೋರಾಟ ಸಮಿತಿ ನಿರ್ಧರಿಸಿದ್ದು, ಹೀಗಾಗಿ ಸೆ.22ರಂದು ಬೆಳಗಾವಿಯಲ್ಲಿ ಬೃಹತ್ ಪಂಚಮಸಾಲಿ ಲಿಂಗಾಯತ ವಕೀಲರ ಸಮಾವೇಶ ಆಯೋಜಿಸಲಾಗಿದೆ ಎಂದು ಕೂಡಲಸಂಗಮದ ಶ್ರೀ ಬಸವ ಜಯ ಮೃತುಂಜ್ಯಯ ಸ್ವಾಮೀಜಿ ಹೇಳಿದರು.

Reservation: ಬೆಳಗಾವಿಯಲ್ಲಿ ಸೆ.22ಕ್ಕೆ ಲಿಂಗಾಯತ ಪಂಚಮಸಾಲಿ ವಕೀಲರ ಬೃಹತ್ ಸಮಾವೇಶ

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಚಿಕ್ಕೋಡಿ ಪಂಚಮಸಾಲಿ ಲಿಂಗಾಯತ ವಕೀಲರ ಪೂರ್ವಭಾವಿ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ರಾಜ್ಯಾದ್ಯಂತ ಬೃಹತ್ ಹೋರಾಟದ ಬಳಿಕ ಬಿಜೆಪಿ ಸರ್ಕಾರದ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಂದನೆ ನೀಡಿದಷ್ಟು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದಿಸುತ್ತಿಲ್ಲ, ಅಧಿಕಾರ ಇರದಿದ್ದಾಗ ಗರ್ಜಿಸುವ ರಾಜಕಾರಣಿಗಳು ಅಧಿಕಾರ ಬಂದ ಮೇಲೆ ಯಾಕೆ ಮೌನ ವಹಿಸುತ್ತಾರೆ ಎಂಬುದು ಅರ್ಥವಾಗುತ್ತಿಲ್ಲ, ಅಧಿಕಾರ ಇಲ್ಲದಿದ್ದಾಗ ಹೋರಾಟಕ್ಕೆ ಬಲ ಕೊಡುತ್ತೀರಾ ಅಧಿಕಾರ ಇದ್ದಾಗಲು ಬಲ ಕೊಡಬೇಕೆಂದು ನಮ್ಮ ಆಗ್ರಹ ಎಂದರು.

ಶಾಸಕರು ಸರಕಾರದ ಮೇಲೆ ಒತ್ತಡ ಹಾಕಲಿ:
ರಾಜ್ಯದಲ್ಲಿ 20 ಮಂದಿ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಸೇರಿದ ಶಾಸಕರಿದ್ದಾರೆ. ಅಧೀವೇಶನದಲ್ಲಿ ಮೀಸಲಾತಿ ಕುರಿತು ಪ್ರಸ್ತಾಪಿಸಬೇಕೆಂದು ಹೇಳಿದಾಗ ಸ್ಪೀಕರ್‌ ಅವಕಾಶ ಕೊಡಲಿಲ್ಲ ಎನ್ನುವವರು ನೇರವಾಗಿ ಮುಖ್ಯಮಂತ್ರಿ ಜೊತೆ ಯಾಕೆ ಮಾತುಕತೆ ನಡೆಸಲಿಲ್ಲ, ಅಧಿಕಾರ ಶಾಶ್ವತವಲ್ಲ ಸಮಾಜ ಶಾಶ್ವತ ಎಂಬುದು ಅರಿತು ಶಾಸಕರು ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದರು.


Spread the love

About Laxminews 24x7

Check Also

ಆನ್‌ಲೈನ್ ಗೇಮಿಂಗ್ ಪ್ರಚಾರ-ನಿಯಂತ್ರಣ ಕಾಯಿದೆ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ: ಆ.30ಕ್ಕೆ ವಿಚಾರಣೆ

Spread the love ಬೆಂಗಳೂರು: ಹಣವನ್ನು ಪಣಕ್ಕಿಟ್ಟು ಆಡುವಂತಹ ಆನ್‌ಲೈನ್​ ಗೇಮ್​ಗಳಿಗೆ ನಿಷೇಧ ಹೇರುವುದಕ್ಕೆ ಅವಕಾಶ ಕಲ್ಪಿಸುವ ಆನ್‌ಲೈನ್ ಗೇಮಿಂಗ್ ಪ್ರಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ