Breaking News

ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ SDPI ಖ್ಯಾತೆ

Spread the love

ಹುಬ್ಬಳ್ಳಿ, ಸೆಪ್ಟಂಬರ್ 06: ಇಲ್ಲಿನ ಚೆನ್ನಮ್ಮ ವೃತ್ತದ ಬಳಿ ಇರುವ ವಿವಾದಿತ ಈದ್ಗಾ ಮೈದಾನದಲ್ಲಿ ನಿರಂತರ ಪ್ರಯತ್ನ, ಹೋರಾಟಗಳ ಫಲವಾಗಿ ಗಣೇಶ ಕೂರಿಸಲು, ಆಗಸ್ಟ್ 15ರಂದು ಧ್ವಜಾರೋಹಣ ಮಾಡಲು ಅವಕಾಶ ಸಿಕ್ಕಿದೆ. ಮೊನ್ನೆಯಷ್ಟೆ ಸರ್ಕಾರವೇ ಇಲ್ಲಿ ಗಣೇಶೋತ್ಸವಕ್ಕೆ ಅವಕಾಶ ನೀಡಿದರೂ ಸಹಿತ ಇಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ (ಎಸ್‌ಡಿಪಿಐ) ವಿರೋಧ ವ್ಯಕ್ತಪಡಿಸಿದೆ.

ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ SDPI ಖ್ಯಾತೆ

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಮೂರು ದಿನಗಳ ಅವಕಾಶ ಸಿಕ್ಕಿದೆ. ಪೊಲೀಸ್ ಬಿಗಿ ಬಂದೋಬಸ್ತ್ ನಡುವೆ ನಾಳೆ ಸೆಪ್ಟಂಬರ್ 07ರಂದು ಶನಿವಾರ ‘ರಾಮರೂಪಿ ಗಣೇಶ’ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಒಂದು ದಿನ ಬಾಕಿ ಇರುವಾಗಲೇ ಇದೀಗ ಎಸ್‌ಡಿಪಿಐ ಆಕ್ಷೇಪ ವ್ಯಕ್ತಪಡಿಸಿದೆ.

ನಗರದ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ನೀಡಿರುವ ಅನುಮತಿಯನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ (ಎಸ್‌ಡಿಪಿಐ) ನಗರ ಬ್ಲಾಕ್‌ ಕಮಿಟಿ ಅಧ್ಯಕ್ಷ ಮಲ್ಲಿಕ್ ಜಾನ್ ಕಳಸ್ ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಆಯುಕ್ತರ ಕಚೇರಿಯ ಅಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

ಎಸ್‌ಡಿಪಿಐ ಹೇಳುತ್ತಿರುವ ಕಾರಣವೇನು?

ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯದವರಿಗೆ ಪ್ರಾರ್ಥನೆ (ನಮಾಜ್) ಮಾಡಲು ಮತ್ತು ಜನವರಿ 26 ಹಾಗೂ ಆಗಸ್ಟ್ 15ರಂದು ರಾಷ್ಟ್ರಧ್ವಜಾರೋಹಣ ಮಾಡಲು ಮಾತ್ರ ಅವಕಾಶ ಇರುತ್ತದೆ. ಆದರೆ, ಇತ್ತೀಚಿನ ವರ್ಷಗಳಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು ಮೈದಾನದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡುತ್ತಿರುವುದು ಸಮುದಾಯದ ಜನರಿಗೆ ಅಸಮಾಧಾನ ಉಂಟು ಮಾಡಿದೆ’ ಎಂದು ಅವರು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ವಿವಾದಾತ್ಮಕ ಮೈದಾನದಲ್ಲಿ ಪದೇ ಪದೆ ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡುತ್ತಿರುವುದು ಎರಡೂ ಸಮುದಾಯದ ಜನರಲ್ಲಿ ವೈಷಮ್ಯ ಉಂಟಾಗಲು ದಾರಿ ಮಾಡಿಕೊಟ್ಟಂತಾಗುತ್ತದೆ. ಅಧಿಕಾರಿಗಳು ಈದ್ಗಾ ಮೈದಾನದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪಿಸಲು ನೀಡಿರುವ ಅನುಮತಿಯನ್ನು ತಕ್ಷಣ ರದ್ದುಪಡಿಸಿ, ಪಾಲಿಕೆಗೆ ಸಂಬಂಧಿಸಿದ ಬೇರೆ ಮೈದಾನದಲ್ಲಿ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಕೊಡಬೇಕು’ ಎಂದು ಒತ್ತಾಯಿಸಿದ್ದಾರೆ.

ಎಸ್‌ಡಿಪಿಐ ಪ್ರಮುಖರಾದ ಅಮನ ಖಾನ ಶಿವಳ್ಳಿ, ಆದಮ ಅತ್ತಾರ, ಹಮೀದ ಬಂಗಾಲಿ, ಬಶೀರ್ ಮುದುಗಲ್, ಎಜಾಜ್ ಶೇಖ್‌ ಹಾಗೂ ಇತರರು ಪಾಲಿಕೆಗೆ ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮ

Spread the love ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮಕ್ಕೆ ಬೆಳಗಾವಿ ಮರಾಠಾ ಲಘು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ