ಮೂಡಲಗಿ: ತಾಲ್ಲೂಕಿನ ಶಿವಾಪುರ (ಹ) ಗ್ರಾಮದ ಅಂಬಲಿ ಒಡೆಯ ಅಡವಿಸಿದ್ಧೇಶ್ವರ ಜಾತ್ರೆ ಸೆ. 6ರಿಂದ 9ರವರೆಗೆ ಪೀಠಾಧಿಪತಿ ಅಡವಿಸಿದ್ಧರಾಮ ಸ್ವಾಮೀಜಿ ನೇತೃತ್ವದಲ್ಲಿ ನಡೆಯಲಿದೆ.
ಸೆ.6ರಂದು ಬೆಳಿಗ್ಗೆ ಜಾತ್ರೆಯು ಷಟಸ್ಥಲ್ ಧ್ವಜಾರೋಹಣದೊಂದಿಗೆ ಆರಂಭವಾಗುವುದು. ನಿಡಗುಂದಿಕೊಪ್ಪದ ಅಭಿನವ ಚನ್ನಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.
ಮುಖ್ಯ ಅತಿಥಿಗಳಾಗಿ ಗೋಕಾಕದ ಅಶೋಕ ಪೂಜೇರಿ, ಭೀಮಪ್ಪ ಗಡಾದ, ಸರ್ವೋತ್ತಮ ಜಾರಕಿಹೊಳಿ ಭಾಗವಹಿಸುವರು. ಬೆಳಿಗ್ಗೆ 10ಕ್ಕೆ ಆರೋಗ್ಯ ಉಚಿತ ತಪಾಸಣೆ ಇರುವುದು. ಸಂಜೆ 4ಕ್ಕೆ ತಾಯಂದಿರಿಂದ ಬಸವ ಬುತ್ತಿ ಕಾರ್ಯಕ್ರಮ, ಸಂಜೆ 6.30ಕ್ಕೆ ಬಸವ ದರ್ಶನ ಪ್ರವಚನ ಮಹಾಮಂಗಲವಾಗುವುದು. ಕೂಡಲಸಂಗಮದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಸಮ್ಮುಖವನ್ನು ದತ್ತಾತ್ರೇಯಬೋಧ ವಹಿಸುವರು.