ರಾಮನಗರ: ತಾಲ್ಲೂಕಿನ ಮಾಯಗಾನಹಳ್ಳಿಯ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಎದುರು ಶುಕ್ರವಾರ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದರಿಂದ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ.
ಕಟ್ಟಡ ನಿರ್ಮಾಣ ಕಾರ್ಮಿಕರಾದ ಗುರುಮೂರ್ತಿ (39), ಶೇಕ್ ಅಫೀಸ್ (45) ಹಾಗೂ ವೆಂಕಟೇಶ್ (50) ಮೃತರು.
ಘಟನೆಯಲ್ಲಿ ಹನುಮಂತ ಅವರು ಗಾಯಗೊಂಡಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೆಲಸದ ನಿಮಿತ್ತ ನಾಲ್ವರು ಕಾರ್ಮಿಕರು ಒಂದೇ ಬೈಕ್ ನಲ್ಲಿ ಹೋಗುತ್ತಿದ್ದರು. ಆಗ ಎದುರಿಗೆ ಬಂದ ಲಾರಿ ಡಿಕ್ಕಿ ಹೊಡೆದಿದೆ. ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ ರಾಮನಗರ ಸಂಚಾರ ಠಾಣೆ ಪೊಲೀಸರು ತಿಳಿಸಿದರು.
ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಟಿ.ವಿ. ಸುರೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.