Breaking News

ಪ್ರಧಾನಿ ಮೋದಿಗೆ ಪತ್ರ ಬರೆದ ದಿನೇಶ್ ಗುಂಡೂರಾವ್

Spread the love

ಬೆಂಗಳೂರು, ಸೆಪ್ಟೆಂಬರ್‌ 06:ಆರೋಗ್ಯ ವಿಮೆಯ ಮೇಲಿನ ಶೇ 18 ರಷ್ಟು ಜಿ.ಎಸ್.ಟಿಯನ್ನ ಮರು ಪರಿಶೀಲಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಒತ್ತಾಯಿಸಿದ್ದಾರೆ. ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿರುವ ಆರೋಗ್ಯ ಸಚಿವರು, ಸೆಪ್ಟೆಂಬರ್ 9 ರಂದು ಸಭೆ ಸೇರಲಿರುವ GST ಕೌನ್ಸಿಲ್‌ಗೆ ಮಧ್ಯಮ ಮತ್ತು ಕಡಿಮೆ ಆದಾಯದ ಪಾಲಿಸಿದಾರರಿಗೆ ಆರೋಗ್ಯ ವಿಮೆಯ ಮೇಲಿನ 18% ತೆರಿಗೆಯನ್ನು ಮರು ಪರಿಶೀಲಿಸುವಂತೆ ಶಿಫಾರಸು ಮಾಡಲು ಮನವಿ ಮಾಡಿದ್ದಾರೆ.

 

ಆರೋಗ್ಯ ವಿಮೆ ಮೇಲೂ ಶೇ 18 ರಷ್ಟು ಜಿಎಸ್.ಟಿ ತೆರಿಗೆ ಹಾಕುವುದು ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ರಿದೆ. ಹೆಚ್ಚಿನ ತೆರಿಗೆಯಿಂದಾಗಿ ಹೆಲ್ತ್ ಇನ್ಸೂರೆನ್ಸ್ ಪ್ರೀಮಿಯಂ ದುಬಾರಿಯಾಗಿದ್ದು, ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಸಿಗುತ್ತಿಲ್ಲ. ಬಹುತೇಕ ಮಧ್ಯಮ ವರ್ಗದವರು ಇಂದು ಆರೋಗ್ಯ ವಿಮೆಗಳಿಂದ ದೂರವೇ ಉಳಿಯುತ್ತಿದ್ದಾರೆ.. ಆದರೆ ವೈದ್ಯಕೀಯ ತುರ್ತು ಪರಿಸ್ಥಿತಿಗಳ ಸಂದರ್ಭಗಳಲ್ಲಿ ಆರೋಗ್ಯ ವಿಮೆಯ ರಕ್ಷಣೆ ಸಿಗದೆ ಇಡೀ ಕುಟುಂಬ ವರ್ಗವೇ ಆರ್ಥಿಕ ಸಂಕಷ್ಟಕ್ಕೆ ಸಿಲುಕುವುದನ್ನ ನಾವು ಕಾಣುತ್ತಿದ್ದೇವೆ ಎಂದು ಸಚಿವ ದಿನೇಶ್ ಗುಂಡೂರಾವ್ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ