Breaking News

ಯಾವುದೇ ಸಮಯದಲ್ಲೂ ಚುನಾವಣೆ ಬರಬಹುದು ಸಿದ್ಧರಾಗಿ : HD ಕುಮಾರಸ್ವಾಮಿ ಶಾಕಿಂಗ್ ಹೇಳಿಕೆ!

Spread the love

ಶಿವಮೊಗ್ಗ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯರಿಗೆ ತೀವ್ರ ಸಂಕಷ್ಟ ಎದುರಾಗಿದ್ದು, ಕಾನೂನು ಹೋರಾಟ ನಡೆಸುತ್ತಿದ್ದಾರೆ. ಇದೀಗ ಕೇಂದ್ರ ಸಚಿವ HD ಕುಮಾರಸ್ವಾಮಿ ಹೇಳಿಕೆಯು ತೀವ್ರ ಕುತೂಹಲ ಮೂಡಿಸಿದ್ದು, ಯಾವ ಸಮಯದಲ್ಲಾದರೂ ಚುನಾವಣೆ ಬರಬಹುದು.

ಎಲ್ಲದಕ್ಕೂ ಸಿದ್ಧರಾಗಿರಿ ಎಂದು ಕರೆ ನೀಡಿದ್ದಾರೆ.

ಇಂದು ಶಿವಮೊಗ್ಗದಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಈ ಒಂದು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆ 2028ರಲ್ಲೇ ಬರಬಹುದು, 2026ರಲ್ಲಿ ಬರಬಹುದು, 2025ರಲ್ಲೇ ಚುನಾವಣೆ ಬರಬಹುದು. ಯಾವುದಕ್ಕೂ ಮುಂದಿನ ಚುನಾವಣೆಗೆ ಈಗಿನಿಂದಲೇ ಸಿದ್ಧರಾಗಿ ಎಂದು ಹೇಳಿದರು.

ಜನತೆಯಲ್ಲಿ ಕಾಂಗ್ರೆಸ್ ಸರ್ಕಾರದ ಬಗ್ಗೆ ಅಸಮಾಧಾನವಿದೆ. ಹಿಂದಿನ ಸರ್ಕಾರದ ಬಗ್ಗೆ ಆರೋಪ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಅಭಿವೃದ್ಧಿ ಕಾಣ್ತಾ ಇಲ್ಲ. ಜನ ಬೇಸತ್ತಿದ್ದಾರೆ. ಮುಂದಿನ ಮೂರೂವರೆ ವರ್ಷಗಳವರೆಗೆ ಅವಧಿ ಇದ್ದರೂ ಕಾಂಗ್ರೆಸ್ ನಾಯಕರ ತಪ್ಪಿನಿಂದ ಜನರ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದರು.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ