Breaking News

ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಮೇಲೆ ಹರಿದ ಕಾಂಕ್ರಿಟ್ ಮಿಕ್ಸಿಂಗ್ ವಾಹನ; ಸ್ಥಳದಲ್ಲೇ ಸಾವು

Spread the love

ದಗ: ಕಾಂಕ್ರಿಟ್ ಮಿಕ್ಸಿಂಗ್ ವಾಹನ ಹರಿದು ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಸಾವನ್ನಪ್ಪಿರುವ ಘಟನೆ ಗದಗ ನಗರದ ಭೂಮರೆಡ್ಡಿ ಸರ್ಕಲ್ ನಲ್ಲಿ ನಡೆದಿದೆ.

ರಮೇಶ್ ಡಂಬಳ (42) ಮೃತ ಹೆಡ್ ಕಾನ್ಸ್ ಟೇಬಲ್. ಗಜೇಂದ್ರಗಢ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದ ರಮೇಶ್ ಅವರ ಮನೆಯಲ್ಲಿ ನಾಳೆ ಗಣಪತಿ ಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಹೂವು-ಹಣ್ಣು, ಪೂಜೆ ಸಾಮಗ್ರಿಗಳೊಂದಿಗೆ ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದರು.

 

ಈ ವೇಳೆ ಕಾಂಕ್ರಿಟ್ ಮಿಕ್ಸಿಂಗ್ ವಾಹನ ಡಿಕ್ಕಿ ಹೊಡೆದಿದ್ದು, ಕಾನ್ಸ್ ಟೇಬಲ್ ಮೇಲೆಯೇ ಹರಿದು ಹೋಗಿದೆ. ಸ್ಥಳದಲ್ಲೇ ರಮೇಶ್ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಡಿವೈ ಎಸ್ ಪಿ ಜೆ.ಹೆಚ್ ಇನಾಮದಾರ್, ಸಿಪಿಐ ಶಿವಯೋಗಿ ಸೇರಿದಂತೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ