ಬೆಳಗಾವಿ: ರಸ್ತೆಬದಿ ನಿಂತಿದ್ದ ವಿದ್ಯಾರ್ಥಿಗಳ ಮೇಲೆಯೇ ಸರ್ಕಾರಿ ಬಸ್ ಹರಿದಿದ್ದು, ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಗಲಗಲಿಯಲ್ಲಿ ನಡೆದಿದೆ.
10 ವರ್ಷದ ಸುನೀಲ್ ಮೃತ ಬಾಲಕ. ಶಾಲೆಗೆ ರಜೆಯಿದ್ದರೂ ವಿದ್ಯಾರ್ಥಿಗಳು ಟ್ಯೂಷನ್ ಕ್ಲಾಸ್ ಗೆ ಬಂದಿದ್ದರು.
ಟ್ಯೂಷನ್ ಮುಗಿಸಿಕೊಂಡು ವಿದ್ಯಾರ್ಥಿಗಳು ರಸ್ತೆ ದಾಟಿ ರಸ್ತೆ ಪಕ್ಕದಲ್ಲಿ ನಿಂತಿದ್ದರು. ಈ ವೇಳೆ ಜವರಾಯನಂತೆ ಬಂದ ಬಸ್ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಹರಿದಿದೆ. ಓರ್ವ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಹಲವರು ಗಾಯಗೊಂಡಿದ್ದಾರೆ.
ಬಸ್ ಅಥಣಿಯಿಂದ ಕಾರವಾರಕ್ಕೆ ಹೋಗುತ್ತಿತ್ತು. ತಕ್ಷಣ ಬಸ್ ನ್ನು ಅಡ್ಡಗಟ್ಟಿ ನಿಲ್ಲಿಸಿದ ಸ್ಥಳೀಯರು ಚಾಲಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮಕ್ಕಳು ನಿಂತಿರುವುದು ಗಮನಿಸಿದ್ದರೂ ಚಾಲಕನ ನಿರ್ಲಕ್ಷ್ಯದಿಂದಲೇ ದುರಂತ ಸಂಭವಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Laxmi News 24×7