Breaking News

ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ, ಓರ್ವನ ಬಂಧನ: ಸಂತ್ರಸ್ಥೆಯ ರಕ್ಷಣೆ

Spread the love

ಡುಪಿ: ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ವ್ಯಕ್ತಿಯೊಬ್ಬರನ್ನು ಬಂಧಿಸಿರುವ ಘಟನೆ ಕಾರ್ಕಳದ ಸಾಣೂರು ಗ್ರಾಮದಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ.

ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಪ್ರಮೀಳಾ ವಿಜಯ್‌ ಕುಮಾರ್‌ ಎಂಬಾಕೆಯ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದ್ದು, ಈ ಬಗ್ಗೆ ಮಾಹಿತಿ ತಿಳಿದ ಪೊಲೀಸರು ದಾಳಿ ನಡೆಸಿ, ಭರತ್‌ ಎಂಬಾತನನ್ನು ಬಂಧಿಸಿರುವುದಾಗಿ ವರದಿ ವಿವರಿಸಿದೆ.

 

ಈ ಸಂದರ್ಭದಲ್ಲಿ ಓರ್ವ ಸಂತ್ರಸ್ಥೆ ಮಹಿಳೆಯನ್ನು ರಕ್ಷಿಸಿದ್ದು, ಆಪಾದಿತರಾದ ಭರತ್‌ ಕುಮಾರ್‌, ಮನೆಯ ಮಾಲೀಕರಾದ ಪ್ರಮೀಳಾ ವಿಜಯ್‌ ಕುಮಾರ್‌ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ವರದಿ ತಿಳಿಸಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ