Breaking News

ಪುಣೆ-ಬೆಳಗಾವಿ-ಹುಬ್ಬಳ್ಳಿ ವಂದೇ ಭಾರತ್‌ ರೈಲಿಗೆ ಮೋದಿಯಿಂದ ಚಾಲನೆ: ಶೆಟ್ಟರ್‌

Spread the love

ಬೆಳಗಾವಿ: ‘ಪುಣೆ-ಬೆಳಗಾವಿ ಮಧ್ಯೆ ವಂದೇ ಭಾರತ್ ರೈಲು ಆರಂಭಿಸಲು ನಡೆಸಿದ ಪ್ರಯತ್ನ ಈಗ ಸಾಕಾರಗೊಂಡಿದೆ. ಹುಬ್ಬಳ್ಳಿವರೆಗೆ ಸೇವೆ ವಿಸ್ತರಣೆಗೊಂಡಿದ್ದು, ಸೆ.15ರಂದು ಪ್ರಧಾನಿ ನರೇಂದ್ರ ಮೋದಿ ರೈಲಿಗೆ ಚಾಲನೆ ನೀಡಲಿದ್ದಾರೆ’ ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದರು.

 

ಇಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೆಲವು ತಿಂಗಳ ಹಿಂದೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭೇಟಿಯಾಗಿ, ಪುಣೆ-ಬೆಳಗಾವಿ ಮಧ್ಯೆ ವಂದೇ ಭಾರತ್ ರೈಲು ಆರಂಭಿಸಬೇಕು. ಬೆಂಗಳೂರು-ಧಾರವಾಡ ವಂದೇ ಭಾರತ ರೈಲಿನ ಸೇವೆಯನ್ನು ಬೆಳಗಾವಿಯವರೆಗೆ ವಿಸ್ತರಿಸಬೇಕು ಎಂದು ಮನವಿ ಮಾಡಿದ್ದೆ. ಈಗ ಪುಣೆ-ಬೆಳಗಾವಿ-ಹುಬ್ಬಳ್ಳಿ ವಂದೇ ಭಾರತ್‌ ರೈಲು ಸೇವೆ ಆರಂಭವಾಗಿದೆ. ಅಂದು ಬೆಳಗಾವಿ ನಿಲ್ದಾಣದಲ್ಲೂ ಕಾರ್ಯಕ್ರಮ ಆಯೋಜಿಸಿ, ರೈಲು ಸ್ವಾಗತಿಸಲಾಗುವುದು’ ಎಂದರು.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ