ಬೆಂಗಳೂರು, ಸೆಪ್ಟಂಬರ್ 12: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಬುಧವಾರ ತಡರಾತ್ರಿ ಗಣೇಶ ವಿಸರ್ಜನೆ ವೇಳೆ ಕಿಡಿಗೇಡಿಗಳಿಂದ ಗಲಭೆ ನಡೆದಿದೆ. ಇದೆಲ್ಲ ನೋಡಿದರೆ ಕರ್ನಾಟಕದ ಪರಿಸ್ಥಿತಿ ಎಲ್ಲಿಗೆ ಬಂದು ನಿಂತಿದೆ. ಹಿಂದೂಗಳ ಹಬ್ಬದಂದು ನಡೆದ ಈ ದುಷ್ಕೃತ್ಯ ಅತ್ಯಂತ ಖಂಡನೀಯ ಎಂದು ರಾಜ್ಯ ಸರ್ಕಾರದ ಆಡಳಿತ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಂಡ್ಯ ಗಲಭೆ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು, ಎಲ್ಲಿಗೆ ಬಂದು ನಿಂತಿದೆ ನಮ್ಮ ಕರ್ನಾಟಕದ ಪರಿಸ್ಥಿತಿ?. ಸರ್ವಜನಾಂಗದ ಶಾಂತಿಯ ತೋಟವನ್ನು ರಾಜ್ಯ ಕಾಂಗ್ರೆಸ್ ಅಕ್ಷರಶಃ ಪಾಕಿಸ್ತಾನ ಮಾಡುತ್ತಿದೆ ಎಂದು ಗುಡುಗಿದರು.
ಮಂಡ್ಯದ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಬೆಳವಣಿಗೆ ನಿಜಕ್ಕೂ ಖಂಡನೀಯ. ಮಸೀದಿ ಮುಂದೆ ಗಣಪತಿ ಮೆರವಣಿಗೆ ಹೋಗಬಾರದು ಎಂಬ ಕಾನೂನು ಎಲ್ಲಿದೆ?. ಗಣೇಶ ಮೂರ್ತಿ ಇದ್ದರೂ ಕಲ್ಲು ತೂರಾಟ ಮಾಡಿ ಬೆಂಕಿ ಹಚ್ಚಿದ್ದಾರೆ.