Breaking News

ರೈತ ವಿರೋಧಿ ಸರಕಾರ ಎಂದು ಘೋಷಣೆ ಕೂಗಿದ ರೈತ ಸಂಘ

Spread the love

ಗೋಕಾಕ: ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರ ಸ್ವಕ್ಷೇತ್ರದ ಸಂತ್ರಸ್ತರು ತಹಸೀಲ್ದಾರ್ ಕಚೇರಿ ಆವರಣದಲ್ಲಿ ಮಂಗಳವಾರ ದನ-ಕರು, ಎಮ್ಮೆ- ಎತ್ತುಗಳೊಂದಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಇಲ್ಲಿನ ತಹಶೀಲ್ದಾರರ ಕಚೇರಿಗೆ ನೆರೆ ಸಂತ್ರಸ್ತರು ಮುತ್ತಿಗೆ ಹಾಕಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಘೋಷಣೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ರು.

6 ತಿಂಗಳು ಕಳೆದರು ಕೂಡ ನೆರೆ ಪರಿಹಾರ ವಿತರಣೆಯಾಗದ ಹಿನ್ನೆಲೆಯಲ್ಲಿ ಪುಟ್ಟ ಮಕ್ಕಳನ್ನು ಕರೆದುಕೊಂಡು ಬಂದು ಬೊಬ್ಬೆ ಹೊಡೆದು ಸರ್ಕಾರ ವಿರುದ್ದ ಕಿಡಿಕಾರಿದ್ರು.

 

ವಿವಿಧ ರೈತ ಸಂಘಟನೆಗಳ ನೇತೃತ್ವದಲ್ಲಿ ನೂರಾರು ನೆರೆ ಸಂತ್ರಸ್ತರು ಬಂದು ದನ, ಎತ್ತು, ‌ಕರುಗಳೊಂದಿಗೆ ಗೋಕಾಕ್ ತಹಶೀಲ್ದಾರ್ ಕಚೇರಿ‌ ಒಳಗೆ ಹೋಗಲು ಯತ್ನಿಸಿದರು. ಬಳಿಕ ನಂತರ ಮಧ್ಯಾಹ್ನ ಅಲ್ಲಿಯೇ ಒಲೆ ಹೊತ್ತಿಸಿ ಅಡುಗೆ ತಯಾರಿಸಿ ಊಟ ಮಾಡಿದರು.‌


Spread the love

About Laxminews 24x7

Check Also

ಮಹಾಜನ ವರದಿಯೇ ಅಂತಿಮ ಎಂದು ನಿರ್ಣಯ ಕೈಗೊಳ್ಳಲು ಕನ್ನಡಪರ ಸಂಘಟನೆಗಳ ಒತ್ತಾಯ

Spread the loveಬೆಳಗಾವಿ: ಬೆಳಗಾವಿ ಕರ್ನಾಟಕ ಅವಿಭಾಜ್ಯ ಅಂಗ. ಮಹಾಜನ ವರದಿಯೇ ಅಂತಿಮ ಎಂದು ಐತಿಹಾಸಿಕ ನಿರ್ಣಯ ಕೈಗೊಳ್ಳಲು ಬೆಳಗಾವಿ ಮಹಾನಗರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ