ಹುಬ್ಬಳ್ಳಿ: ಮುಡಾ, ವಾಲ್ಮೀಕಿ ಹಗರಣದಲ್ಲಿ ಕೋರ್ಟ್‌ನಿಂದ ವಿರುದ್ಧವಾಗಿ ತೀರ್ಪು ಬಂದರೆ ಸಿಎಂ ಸಿದ್ದರಾಮಯ್ಯ ಅವರು ಅರವಿಂದ ಕೇಜ್ರಿವಾಲ್ ರೀತಿ ಭಂಡತನ ತೋರದೆ ಮರ್ಯಾದೆಯಿಂದ ರಾಜೀನಾಮೆ ನೀಡಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಸಲಹೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಒಂದು ಕಡೆ ಸಿಎಂ ಸಿದ್ದರಾಮಯ್ಯಗೆ ಬಹಿರಂಗವಾಗಿ ಬೆಂಬಲ ಎಂದು ಹೇಳಿ ಇನ್ನೊಂದೆಡೆ ತಾವು ಸಿಎಂ ಆಕಾಂಕ್ಷಿ ಎನ್ನುತ್ತಿದ್ದಾರೆ.
ಹೈಕಮಾಂಡ್ ಸೂಚನೆ ನೀಡಿದರೂ, ಕಾಂಗ್ರೆಸ್‌ನಲ್ಲಿ ಸಿಎಂ ಹೇಳಿಕೆಗಳು ನಿಂತಿಲ್ಲ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ತಪ್ಪು ಮಾಡಿಲ್ಲ. ಅವರೊಬ್ಬ ಮುಗ್ಧ ಮಹಿಳೆ ಎಂದರು.