Breaking News

ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ: ಅರ್ಜಿ ವಿಧಾನ, ಲಿಂಕ್ ಇಲ್ಲಿದೆ

Spread the love

ಧಾರವಾಡ ಸೆಪ್ಟೆಂಬರ್ 13: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಧಾರವಾಡ (ಗ್ರಾಮೀಣ), ಕಲಘಟಗಿ, ಕುಂದಗೋಳ ಹಾಗೂ ನವಲಗುಂದ ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ: ಅರ್ಜಿ ವಿಧಾನ, ಲಿಂಕ್ ಇಲ್ಲಿದೆ

ಅರ್ಹ ಮಹಿಳಾ ಅಭ್ಯರ್ಥಿಗಳುwww.karnemakaone.kar.nic.in/abcd/ವೆಬ್‍ಸೈಟ್ ಮೂಲಕ ಅಕ್ಟೋಬರ್ 10, 2024 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2447850 ಗೆ ಅಥವಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಾರದರ್ಶಕ ಬೆಳೆ ವಿಮೆ ಪರಿಹಾರಕ್ಕೆ ಚಿಂತನೆ: ಸಚಿವ ಸಂತೋಷ ಲಾಡ್

ಪ್ರಸಕ್ತ 2024 ನೇ ಸಾಲಿನ ಬೆಳೆ ವಿಮೆ ಕುರಿತಂತೆ ಜಿಲ್ಲೆಯ ವಿವಿಧ ಭಾಗಗಳ ರೈತ ಮುಖಂಡರ ಜೊತೆ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅಧ್ಯಕ್ಷತೆಯಲ್ಲಿಂದು ಸಭೆ ಜರುಗಿತು. ಬೆಳೆ ಕಟಾವು, ಬೆಳೆ ಹಾನಿ, ವಿಮಾ ಕಂಪನಿಗಳ ಅವೈಜ್ಞಾನಿಕ ಪದ್ಧತಿ, ಪರಿಹಾರ ವ್ಯತ್ಯಾಸ ಕುರಿತಂತೆ ಹಲವು ರೈತ ಮುಖಂಡರು ತಮ್ಮ ಅಭಿಪ್ರಾಯ ಹಂಚಿಕೊಂಡರು. ಸಚಿವ ಸಂತೋಷ ಲಾಡ್ ಅವರು ಮಾತನಾಡಿ, ಬೆಳೆ ಕಟಾವು ಮಾದರಿಗಳನ್ನು ಎರಡು ಮೂರು ಪಟ್ಟು ಹೆಚ್ಚಿಸುವಲ್ಲಿ ಕ್ರಮಕೈಗೊಳ್ಳಲು ಸರಕಾರದ ಮಟ್ಟದಲ್ಲಿ ಚರ್ಚಿಸಲಾಗುವು ಎಂದರು.


Spread the love

About Laxminews 24x7

Check Also

ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ಮಾಡಿದ ಶಾಸಕ ಅರವಿಂದ ಬೆಲ್ಲದ.

Spread the love ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ