Breaking News

ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್ : `ಧನ್ಯಶ್ರೀ’ ಯೋಜನೆಯಡಿ ಸ್ವ-ಉದ್ಯೋಗಕ್ಕೆ ಸಿಗಲಿದೆ 30,000 ರೂ. ಸಬ್ಸಿಡಿ!

Spread the love

ಬೆಂಗಳೂರು : ರಾಜ್ಯ ಸರ್ಕಾರವು ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಸ್ವ-ಉದ್ಯೋಗ ಕೈಗೊಳ್ಳಲು ಸರ್ಕಾರದಿಂದ 30,000 ರೂ. ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆ.21 ಕೊನೆಯ ದಿನವಾಗಿದೆ.

ಮಹಿಳಾ ಅಭಿವೃದ್ಧಿ ನಿಗಮ ವತಿಯಿಂದ ಪ್ರಸ್ತಕ ಸಾಲಿಗೆ ಧನ್ಯಶ್ರೀ ಸಹಾಯಧನಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಲು ಸೆ.21 ಕೊನೆಯ ದಿನವಾಗಿದೆ.

ಧನ್ಯಶ್ರೀ ಯೋಜನೆ:
ಹೆಚ್‌ಐವಿ ಸೋಂಕಿತ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ರೂ.30 ಸಾವಿರ ಪ್ರೋತ್ಸಾಹಧನ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು

ಆಧಾರ್ ಕಾರ್ಡ ಪ್ರತಿ

ಪೋಟೋ

ಬ್ಯಾಂಕ್ ಪಾಸ್ ಬುಕ್

ರೇಷನ್ ಕಾರ್ಡ್

ಸ್ವ-ಉದ್ಯೋಗದ ಪೂರಕ ದಾಖಲೆಗಳು

ಯೋಜನಾ ವರದಿ

ನಿವಾಸಿ ದೃಢೀಕರಣ ಪ್ರಮಾಣ ಪತ್ರ

ಅರ್ಹ ಫಲಾನುಭವಿಗಳು ಅಗತ್ಯ ಪೂರಕ ದಾಖಲೆಗಳ ಸಮೇತ ಸೇವಾ ಸಿಂಧು ಪೋರ್ಟಲ್ ಮತ್ತು ನಿಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರವನ್ನು ಭೇಟಿ ಮಾಡಿ ಆನ್ಲೈನ್ ಮೂಲಕ ಸೆ.21 ರೊಳಗೆ ಅರ್ಜಿ ಸಲ್ಲಿಸಬೇಕು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ