ಬೆಂಗಳೂರು,ಸೆ.13-ಪಕ್ಷದಲ್ಲಿ ಉಂಟಾಗಿದ್ದ ಸಣ್ಣಪುಟ್ಟ ಸಮಸ್ಯೆಗಳನ್ನು ಸಂಘ ಪರಿವಾರದ ನಾಯಕರು ಪರಿಹರಿಸಿದ್ದಾರೆ. ಸದ್ಯಕ್ಕೆ ನಮಲ್ಲಿ ಯಾವುದೇ ಗೊಂದಲ, ಭಿನ್ನಾಭಿಪ್ರಾಯಗಳಿಲ್ಲ ಎಂದು ಮಾಜಿ ಸಚಿವ ಹಾಗೂ ಬಿಜೆಪಿಯ ಭಿನ್ನಮತೀಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪಷ್ಟಪಡಿಸಿದ್ದಾರೆ.
ರಾಜಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಸಭೆ ಬಳಿಕ ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ದರಾಗಿದ್ದೇವೆ ಎಂದು ಪರಿವಾರದ ನಾಯಕರಿಗೆ ನಮ ತೀರ್ಮಾನವನ್ನು ತಿಳಿಸಿದ್ದೇವೆ. ನಮಲ್ಲಿ ಗೊಂದಲ ಮತ್ತು ಭಿನ್ನಾಭಿಪ್ರಾಯಗಳು ಇಲ್ಲವೇ ಇಲ್ಲ. ನಾಯಕತ್ವ ಪ್ರಶ್ನೆಯೂ ಉದ್ಭವಿಸುವುದಿಲ್ಲ ಎಂದು ಪುನರುಚ್ಚರಿಸಿದರು.
ರಾಜ್ಯಪಾಲರಿಗೆ ದೂರು ನೀಡುವ ವೇಳೆ ಪಕ್ಷದ ಪ್ರಮುಖರು ನಿಮ ಬಳಿ ಇಲ್ಲವಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ, ನಿಮ ಪ್ರಕಾರ ಪ್ರಭಾರಿಗಳು, ಪ್ರಭಾವಿಗಳು ಎಂದರೆ ಯಾರು? ಸಾಮಾನ್ಯ ಕಾರ್ಯಕರ್ತನಾದರೂ ಕೂಡ ಪ್ರಭಾವಿಯೇ ಎಂದು ಹೇಳಿದರು.
Laxmi News 24×7