ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಕಿಲ್ಲಾ ತೊರಗಲ್ಲ ಗ್ರಾಮದ ಶ್ರೀ ದುರ್ಗಾ ದೇವಿಯ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.
ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮುಖಂಡರಾದ ಕೆ ವಿ ಪಾಟೀಲ್, ತೌಕೀರ್, ಶಿವನಗೌಡ ಪಾಟೀಲ, ಶ್ರೀಧರ್ ಸಿಂದೇ, ಅವಿನಾಶ ಸಾಲುಂಕೆ, ಭೀಮಶಿ ಚುಲಕಿ, ಮಂಜುನಾಥ ರಾಯಜಾದೆ, ವಿಠ್ಠಲ ದಳವಿ, ಆಕಾಶ್ ಹಲ್ಯಾಳ, ಸಿದ್ದು ಹಲ್ಯಾಳ, ಶ್ರೀಕಾಂತ್ ಪೂಜೇರಿ ಹಾಗೂ ಅನೇಕ ಹಿರಿಯರು, ಮುಖಂಡರು, ಯುವಕರು ಉಪಸ್ಥಿತರಿದ್ದರು.
Laxmi News 24×7