Breaking News

ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ;ಶಿಕ್ಷಕನನ್ನು ವಶಕ್ಕೆ ಪಡೆದ ಪೊಲೀಸರು

Spread the love

ಚಿಕ್ಕೋಡಿ: ಶಾಲಾ ವಿದ್ಯಾರ್ಥಿನಿಯರಿಗೆ ಅಶ್ಲೀಲ ಚಿತ್ರ ತೋರಿಸುವುದು ಮತ್ತು ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಕನೋರ್ವನನ್ನು ಚಿಕ್ಕೋಡಿ ಠಾಣೆಯ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಚಿಕ್ಕೋಡಿ ನಗರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಶಿಕ್ಷಕ ಲೈಂಗಿಕ ಕಿರುಕುಳ ನೀಡುವ ಕುರಿತು ವಿದ್ಯಾರ್ಥಿನಿಯರು ಅಳುತ್ತಾ ಮನೆಗೆ ಹೋದಾಗ ಬಾಲಕಿಗೆ ಪೋಷಕರು ಪ್ರಶ್ನಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

Chikkodi: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ;ಶಿಕ್ಷಕನನ್ನು ವಶಕ್ಕೆ ಪಡೆದ ಪೊಲೀಸರು

ಬಾಲಕಿಯ ತಂದೆ ಇತರ ಪೋಷಕರಿಗೆ ಮಾಹಿತಿ ನೀಡಿ ವಿಚಾರಿಸಿದಾಗ 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಈ ಶಿಕ್ಷಕ ಲೈಂಗಿಕ ಕಿರುಕುಳ ನೀಡಿದ್ದ ಎಂಬ ಮಾಹಿತಿ ಲಭ್ಯವಾಗಿದ್ದು, ಪೋಷಕರು ದೂರು ನೀಡಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ಸದ್ಯ ಆರೋಪಿ ಶಿಕ್ಷಕನನ್ನು ವಶಕ್ಕೆ ಪಡೆದ ಚಿಕ್ಕೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.


Spread the love

About Laxminews 24x7

Check Also

ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ!

Spread the love ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ! • …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ