ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ನಂತರ ದೆಹಲಿ ರಾಜಕೀಯ ವಲಯದಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಿದೆ. ಕೇಜ್ರಿವಾಲ್ ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿರೋದು (Anna Hazare) ಅಚ್ಚರಿ ಮೂಡಿಸಿದೆ.
ಈತನ್ಮಧ್ಯೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ ನಂತರ ಇದೀಗ ಕೇಜ್ರಿವಾಲ್ ಅವರ ನಿರ್ಧಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅಣ್ಣಾ ಹಜಾರೆ, ‘ಅರವಿಂದ್ ಕೇಜ್ರಿವಾಲ್ ರಾಜಕೀಯಕ್ಕೆ ಹೋಗಲು ನಿರ್ಧರಿಸಿದಾಗ ನಾನು ನಿರಾಕರಿಸಿದ್ದೆ’ ಎಂದು ಹೇಳಿದರು.
ಈ ಬಗ್ಗೆ ಮಾತನಾಡಿರುವ ಅಣ್ಣಾ ಹಜಾರೆ, ‘ರಾಜಕೀಯಕ್ಕೆ ಹೋಗಬೇಡಿ, ಸಮಾಜಕ್ಕೆ ಸೇವೆ ಸಲ್ಲಿಸಿ, ನೀವು ದೊಡ್ಡ ವ್ಯಕ್ತಿಯಾಗುತ್ತೀರಿ ಎಂದು ನಾನು ಆಗಲೇ ಅರವಿಂದ್ ಕೇಜ್ರಿವಾಲ್‌ಗೆ ಹೇಳಿದ್ದೆ. ನಾವು ಅನೇಕ ವರ್ಷಗಳಿಂದ ಒಟ್ಟಿಗೆ ಇದ್ದೆವು. ಆ ಸಮಯದಲ್ಲಿ ನಾನು ರಾಜಕೀಯಕ್ಕೆ ಹೋಗಬೇಡಿ ಎಂದು ಅವರಿಗೆ ಪದೇ ಪದೇ ಹೇಳುತ್ತಿದ್ದೆ. ಸಮಾಜ ಸೇವೆ ಸಂತೋಷ ನೀಡುತ್ತದೆ. ಆದರೆ ಅವನ ಹೃದಯದಲ್ಲಿ ಏನಿದೆ ಅನ್ನೋದು ನನಗೆ ಗೊತ್ತಿಲ್ಲ’ ಎಂದು ಹೇಳಿದರು.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಜೈಲಿನಿಂದ ಬಿಡುಗಡೆಯಾದ ಎರಡು ದಿನಗಳ ನಂತರ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮತ್ತು ದೆಹಲಿಯಲ್ಲಿ ಶೀಘ್ರ ಚುನಾವಣೆಗೆ ಒತ್ತಾಯಿಸುವುದಾಗಿ ಭಾನುವಾರ ಘೋಷಿಸಿದ್ದಾರೆ. ಈ ವೇಳೆ ಅವರು, ‘ಜನರು ಪ್ರಾಮಾಣಿಕತೆಗೆ ಪ್ರಮಾಣ ಪತ್ರ ನೀಡುವವರೆಗೂ ಮುಖ್ಯಮಂತ್ರಿ ಸ್ಥಾನದಲ್ಲಿ ಕೂರುವುದಿಲ್ಲ, ಅವರೇ ಮುಂದಿನ ಚುನಾವಣೆಯಲ್ಲಿ ನನ್ನನ್ನು ಸಿಎಂ ಮಾಡಲಿ’ ಎಂದು ಹೇಳಿದ್ದರು.