ನಿಪ್ಪಾಣಿ: ನಗರದ ಹೊರವಲಯದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ತವನಿಧಿ ಘಟ್ಟದ ಕೆಳಗೆ ಭಾನುವಾರ ಸಂಜೆ ಸಂಭವಿಸಿದ ಸರಣಿ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ.
ಸ್ಥಳೀಯ ನಿವಾಸಿ ಜಬಿನ್ ಮಕಾನದಾರ(58), ಚಿಕ್ಕೋಡಿ ತಾಲ್ಲೂಕಿನ ಖಡಕಲಾಟದ ಗಣಪತಿ ಮಾನೆ(45), ರೇಖಾ ಗಾಡಿವಡ್ಡರ(35), ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಪಟ್ಟಣಕೋಡೊಲಿಯ ದಿಲದಾರ್ ಮುಲ್ಲಾ(61) ಮೃತರು.

ಇದೇ ಘಟನೆಯಲ್ಲಿ ಗಾಯಗೊಂಡ 4 ಮಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
‘ಬೆಳಗಾವಿಯಿಂದ ಕೊಲ್ಹಾಪುರಕ್ಕೆ ಹೋಗುತ್ತಿದ್ದ ಕಂಟೇನರ್ ಘಟ್ಟದಿಂದ ಇಳಿಯುತ್ತಿದ್ದಂತೆ ನಿಯಂತ್ರಣ ತಪ್ಪಿ, ರಸ್ತೆಯ ಎರಡೂ ಬದಿಯಲ್ಲಿದ್ದ ತಲಾ ಎರಡು ಕಾರು, ಲಾರಿ ಮತ್ತು ಒಂದು ಬೈಕ್‍ಗೆ ಗುದ್ದಿದೆ. ಆಗ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ’
ಎಂದು ಪೊಲೀಸರು ತಿಳಿಸಿದ್ದಾರೆ. ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Laxmi News 24×7