Breaking News

ಬೆಳಗಾವಿಯವರೆಗೆ ಸೇವೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ಶೆಟ್ಟರ್ ಪತ್ರ

Spread the love

ಬೆಳಗಾವಿ: ‘ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಸೇವೆಯನ್ನು ಬೆಳಗಾವಿಯವರೆಗೆ ವಿಸ್ತರಿಸಿ’ ಎಂದು ಸಂಸದ ಜಗದೀಶ ಶೆಟ್ಟರ್‌ ಅವರು, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಭಾನುವಾರ ಪತ್ರ ಬರೆದಿದ್ದಾರೆ.

‘ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಸೇವೆಯನ್ನು ಬೆಳಗಾವಿಯವರೆಗೆ ವಿಸ್ತರಿಸಬೇಕೆಂಬ ಜನರ ಬೇಡಿಕೆ ಬಹಳ ದಿನಗಳಿಂದ ಇದೆ.

ಈ ಹಿಂದೆ ಬೆಳಗಾವಿಯವರೆಗೆ ಕೈಗೊಂಡಿದ್ದ ರೈಲಿನ ಪ್ರಾಯೋಗಿಕ ಸಂಚಾರವೂ ಯಶಸ್ವಿಯಾಗಿತ್ತು. ಆದರೆ, ತಾಂತ್ರಿಕ ಕಾರಣ ನೀಡಿದ ರೈಲ್ವೆ ಅಧಿಕಾರಿಗಳು ಸಂಚಾರ ಆರಂಭಿಸಿಲ್ಲ. ಈ ಬಗ್ಗೆ ಪರಿಶೀಲಿಸಿ ಕ್ರಮ ವಹಿಸಬೇಕು’ ಎಂದು ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ