ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಂತಹ ಪ್ರಮುಖ 5 ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದೆ. ಈ ಯೋಜನೆಯಡಿಯಲ್ಲಿ ಪ್ರತಿ ಮನೆಯ ಯಜಮಾನಿಗೆ ಖಾತೆಗೆ 2,000 ರೂಪಾಯಿ ಜಮೆ ಮಾಡುತ್ತಾ ಬಂದಿದೆ. ಆದರೆ, ಇದೀಗ 1.78 ಲಕ್ಷ ಮಹಿಳೆಯರಿಗೆ ಹಣ ಪಾವತಿಗೆ ತಡೆ ಹಾಕಲಾಗಿದೆ ಎಂದು ತಿಳಿದುಬಂದಿದೆ.
ಹಾಗಾದರೆ ಕಾರಣ ಏನೆಂದು ಇಲ್ಲಿ ತಿಳಿಯಿರಿ.
ಆದಾಯ ತೆರಿಗೆ ಪಾವತಿದಾರರಾಗಿರುವ ಕಾರಣಕ್ಕೆ 1.78 ಲಕ್ಷ ಗೃಹಿಣಿಯರಿಗೆ ಯೋಜನೆಯ ಹಣ ಪಾವತಿಗೆ ತಡೆ ಹಾಕಲಾಗಿದೆ.
ಆದಾಯ ತೆರಿಗೆ ಪಾವತಿಸುತ್ತಿದ್ದರೂ ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿ 2,000 ರೂಪಾಯಿ ಪಡೆಯುತ್ತಿದ್ದಾರೆ. ಅಂತಹವರಿಗೆ ಹಣ ಪಾವತಿ ನಿಲ್ಲಿಸಿ ದಾಖಲೆ ಪರಿಶೀಲನೆ ಮಾಡಲು ಚಾಲನೆ ನೀಡಲಾಗಿದೆ. ಇ-ಗವರ್ನೆನ್ಸ್ ಇಲಾಖೆಗೆ ತನಿಖೆ ನಡೆಸಲು ಮಹಿಳಾ ಮತ್ತು ಮಕ್ಕಳ ಇಲಾಖೆ ಕೋರಿದೆ.
ಆದಾಯ ತೆರಿಗೆ ಪಾವತಿದಾರರು ಗೃಹಲಕ್ಷ್ಮಿ ಯೋಜನೆ ಅರ್ಹರಲ್ಲ. ಆದರೂ ಯೋಜನೆಗೆ ನೋಂದಾಯಿಸಿ 2,000 ಹಣ ಪಡೆಯುತ್ತಿದ್ದ ಹಿನ್ನೆಲೆ 1.78 ಲಕ್ಷ ಮಹಿಳೆಯರ ಹಣ ಪಾವತಿಯನ್ನು ನಿಲ್ಲಿಸಿ ದಾಖಲೆ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಹಾಗೆಯೇ ಮತ್ತೊಂದೆಡೆ ನಕಲಿ ದಾಖಲೆಗಳನ್ನು ಬಿಪಿಎಲ್ ಕಾರ್ಡ್‌ಗಳನ್ನು ಪಡೆದು ಅನ್ನಭಾಗ್ಯ ಯೋಜನೆಯಡಿ ಪಡಿತರ ಪಡೆಯುವವರ ವಿರುದ್ಧವೂ ಸರ್ಕಾರ ಸಮರ ಸಾರಲು ಮುಂದಾಗಿದೆ. ಈಗಾಗಲೇ ಸರ್ಕಾರ ಜಿಲ್ಲಾವಾರು ಪರಿಶೀಲನೆ ನಡೆಸಿ ಅನರ್ಹರ ಪಡಿತರ ಚೀಟಿಗಳನ್ನು ರದ್ದು ಮಾಡುತ್ತಾ ಬರುತ್ತಿದೆ.