Breaking News

HSRP ನಂಬರ್‌ ಪ್ಲೇಟ್‌ ಅಳವಡಿಕೆ ಗಡುವು ಮುಕ್ತಾಯ, ಸೆ.18ರವರೆಗೂ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸೂಚನೆ

Spread the love

ಬೆಂಗಳೂರು,ಸೆ.16- ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್‌ ಪ್ಲೇಟ್‌ (ಎಚ್‌ಎಸ್‌‍ಆರ್‌ಪಿ) ಅಳವಡಿಸುವ ಅಂತಿಮ ಗಡುವು ನಿನ್ನೆಗೆ ಮುಕ್ತಾಯವಾಗಿದ್ದು, ಈ ನಡುವೆ ಸೆ.18ರವರೆಗೂ ಯಾವುದೇ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸಾರಿಗೆ ಇಲಾಖೆ ಸೂಚನೆ ನೀಡಿದೆ.

ಸಾರಿಗೆ ಇಲಾಖೆ ಸೂಚನೆ ಹಿನ್ನೆಲೆಯಲ್ಲಿ ಇಂದು ಕೂಡ ನೋಂದಣಿಗೆ ಅವಕಾಶವಿದ್ದು, ನೋಂದಣಿ ಮಾಡಿಸಿಕೊಳ್ಳದವರಿಗೆ ನೋಂದಣಿ ಮಾಡಿಸಿಕೊಳ್ಳುವ ಅವಕಾಶ ಸಿಕ್ಕಂತಾಗಿದೆ.

ಸೆಪ್ಟೆಂಬರ್‌ 18ರಂದು ಎಚ್‌ಎಸ್‌‍ಆರ್‌ಪಿ ಅಳವಡಿಕೆ ಸಂಬಂಧಿಸಿದ ಅರ್ಜಿ ವಿಚಾರಣೆಗೆ ಹೈಕೋರ್ಟ್‌ ನಲ್ಲಿ ಬರಲಿದೆ. ಹೀಗಾಗಿ, ಅಲ್ಲಿಯವರೆಗೆ ವಾಹನ ಮಾಲೀಕರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳುವುದು ಬೇಡ ಎಂದು ಸಾರಿಗೆ ಇಲಾಖೆ ಆಯುಕ್ತ ಎ.ಎಂ.ಯೋಗೀಶ್‌ ಹೇಳಿದ್ದಾರೆ.

ಸೋಮವಾರದಿಂದ ದಂಡ ವಿಧಿಸುವುದಾಗಿ ಕರ್ನಾಟಕ ಸಾರಿಗೆ ಇಲಾಖೆ ಘೋಷಣೆ ಮಾಡಿತ್ತು. ಕರ್ನಾಟಕ ಪೊಲೀಸ್‌‍ ಇಲಾಖೆ ಸಂಚಾರ ವಿಭಾಗ, ಸಾರಿಗೆ ಇಲಾಖೆಯವರೂ ಹಳೆ ನಂಬರ್‌ ಪ್ಲೇಟ್‌ ಇದ್ದ ವಾಹನದವರಿಗೆ ದಂಡವನ್ನು ವಿಧಿಸಲು ಆರಂಭಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಇದೀಗ ಮೂರು ದಿನದವರೆಗೆ ಕ್ರಮ ಕೈಗೊಳ್ಳದಂತೆ ಸಾರಿಗೆ ಇಲಾಖೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ರಿಯಾಯ್ತಿ ಸಿಕ್ಕಿದೆ.HSRP ನಂಬರ್‌ ಪ್ಲೇಟ್‌ ಅಳವಡಿಕೆ ಗಡುವು ಮುಕ್ತಾಯ, ಸೆ.18ರವರೆಗೂ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸೂಚನೆ

ಸುಮಾರು 1.5 ಕೋಟಿ ವಾಹನಗಳು ಇನ್ನೂ ಹೈ ಸೆಕ್ಯುರಿಟಿ ನಂಬರ್‌ ಪ್ಲೇಟ್‌ನ್ನು ಅಳವಡಿಸಿಕೊಂಡಿಲ್ಲ. ಗಡುವು ವಿಸ್ತರಣೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ಒಪ್ಪಿಗೆ ಬೇಕು ಎಂದು ಸಾರಿಗೆ ಇಲಾಖೆ ಮೂಲಗಳು ಮಾಹಿತಿ ನೀಡಿವೆ.


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ