Breaking News

ಚೀನಾ ಸೈನಿಕರ ವಿರುದ್ಧ ಹೋರಾಡಿಹುತಾತ್ಮರಾದ ವೀರ ಯೋಧರಿಗೆ ನಮನಗಳು: ಬಿಎಸ್‍ವೈ.

Spread the love

ಬೆಂಗಳೂರು: ಚೀನಾ ಸೈನಿಕರ ವಿರುದ್ಧ ಹೋರಾಡಿ ಹುತಾತ್ಮರಾದ ಸೈನಿಕರ ತ್ಯಾಗ ಬಲಿದಾನಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನಮನಗಳನ್ನು ಸಲ್ಲಿಸುವ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಭಾರತ ಚೀನಾ ಗಡಿಯ ಗಲ್ವಾನ್ ಕಣಿವೆಯಲ್ಲಿ ನಡೆದ ಘರ್ಷಣೆಯಲ್ಲಿ ಕೆಚ್ಚೆದೆಯಿಂದ ಹೋರಾಡಿ ಹುತಾತ್ಮರಾದ ನಮ್ಮ ವೀರ ಯೋಧರ ತ್ಯಾಗ ಬಲಿದಾನಕ್ಕೆ ಅನಂತ ನಮನಗಳು. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಇಂತಹ ಕ್ಲಿಷ್ಟ ಸಂದರ್ಭವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಮರ್ಥವಾಗಿ ನಿಭಾಯಿಸಲಿದೆ ಎಂದು ಬರೆದುಕೊಂಡಿದ್ದಾರೆ.

ಪೂರ್ವ ಲಡಾಕ್‍ನ ಗಾಲ್ವಾನ್ ಕಣಿವೆಯಲ್ಲಿ ಚೀನಾದೊಂದಿಗೆ ನಡೆದ ಸಂಘರ್ಷದಲ್ಲಿ 20 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಅಷ್ಟೇ ಅಲ್ಲದೆ 17 ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಭಾರತೀಯ ಸೇನೆಯು ಖಚಿತಪಡಿಸಿದೆ.

ಇತ್ತ ಚೀನಾ ದಾಳಿಗೆ ಪ್ರತ್ಯುತ್ತರ ನೀಡಿರುವ ಭಾರತೀಯ ಸೇನೆಯು ಅಲ್ಲಿನ 43 ಮಂದಿ ಯೋಧರನ್ನು ಸೆದೆಬಡಿದಿದೆ. ಅಷ್ಟೇ ಅಲ್ಲದೆ 100ಕ್ಕೂ ಹೆಚ್ಚು ಚೀನಾ ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಮ್ಮ ಯೋಧರ ಮೃತದೇಹವನ್ನು ಹೊತ್ತೊಯ್ಯಲು ಚೀನಾ ಹೆಲಿಕಾಪ್ಟರ್ ಗಳು ಎಲ್‍ಎಸಿ ಬಳಿ ಹಾರಾಟ ನಡೆಸಿವೆ ಎಂದು ವರದಿಯಾಗಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ