Breaking News

ಗೃಹಲಕ್ಷ್ಮಿ’ ಯೋಜನೆ ನಿತ್ಯ, ನಿರಂತರ : 2 ತಿಂಗಳ ಬಾಕಿ ಹಣ ಒಂದೇ ಬಾರಿ ಅಕೌಂಟ್‌ಗೆ ಜಮೆ : ಸಚಿವೆ ಹೆಬ್ಬಾಳ್ಕರ್ ಹೇಳಿಕೆ

Spread the love

ಬೆಂಗಳೂರು : ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಬಾಕಿ ಉಳಿದ ಎರಡು ತಿಂಗಳ ಹಣ ಒಟ್ಟಿಗೆ ಖಾತೆಗೆ ಜಮೆಯಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ಮಾಹಿತಿ ನೀಡಿದ್ದಾರೆ. ಇನ್ನು ಯೋಜನೆ ಸ್ಥಗಿತವಾಗುವುದಿಲ್ಲ ಎಂದು ಭರವಸೆ ನೀಡಿದ್ದಾರೆ.

'ಗೃಹಲಕ್ಷ್ಮಿ' ಯೋಜನೆ ನಿತ್ಯ, ನಿರಂತರ : 2 ತಿಂಗಳ ಬಾಕಿ ಹಣ ಒಂದೇ ಬಾರಿ ಅಕೌಂಟ್‌ಗೆ ಜಮೆ : ಸಚಿವೆ ಹೆಬ್ಬಾಳ್ಕರ್ ಹೇಳಿಕೆ

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಎಂದಿಗೂ ಬಂದ್ ಆಗುವುದಿಲ್ಲ. 2 ತಿಂಗಳ ಬಾಕಿ ಹಣವನ್ನು ಶೀಘ್ರ ಒಮ್ಮೆಗೆ ಖಾತೆ ಜಮೆ ಮಾಡಲಾಗುವುದು. ಗೃಹಲಕ್ಷ್ಮಿ ಹಣ ನಿತ್ಯ, ಸತ್ಯ, ನಿರಂತರ. ಕಳೆರಡು ತಿಂಗಳಿಂದ ಬರದಿರುವ ಹಣ ಒಂದೇ ಬಾರಿ ಅಕೌಂಟ್‌ಗೆ ಪಾವತಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು.

ಮುಂದಿನ ತಿಂಗಳಿಂದ ಅಂಗನವಾಡಿಗಳಲ್ಲಿ ‘ಗಟ್ಟಿಬೆಲ್ಲ’ ವಿತರಣೆ

ಪಾಲಕರು ನಿರಾಕರಿಸಿದ ಕಾರಣ ಆರ್ಗ್ಯಾನಿಕ್ ಬೆಲ್ಲದ ಬದಲಿಗೆ ಗಟ್ಟಿ ಬೆಲ್ಲವನ್ನೇ ಅಂಗನವಾಡಿ ಕೇಂದ್ರಗಳಲ್ಲಿ ನೀಡಲಾಗುವುದು ಎಂದು ಸಚಿವರು ಹೇಳಿದರು. ಒಂದೂವರೆ ವರ್ಷದ ಹಿಂದಿ‌ನಿಂದಲೇ ಅಂಗನವಾಡಿ ಕೇಂದ್ರಗಳಲ್ಲಿ ಆರ್ಗ್ಯಾನಿಕ್ ಬೆಲ್ಲ ನೀಡಲಾಗುತ್ತಿತ್ತು. ಆದರೆ, ಪಾಲಕರು ವಿರೋಧಿಸಿದ ಕಾರಣ, ಅಕ್ಟೋಬರ್ 1 ರಿಂದಲೇ ಗಟ್ಟಿ ಬೆಲ್ಲ ನೀಡುವುದಾಗಿ ಸಚಿವೆ ತಿಳಿಸಿದರು.


Spread the love

About Laxminews 24x7

Check Also

ಕುರಿ ಕಾಯುವವನ ಮಗನ ಯುಪಿಎಸ್ಸಿ ಸಾಧನೆ

Spread the loveಬೆಳಗಾವಿ: ತಂದೆ ಕುರಿ ಕಾಯುತ್ತಾರೆ. ತಾಯಿ ಹೊಲದಲ್ಲಿ ಕೆಲಸ ಮಾಡುತ್ತಾರೆ. ಮನೆಯಲ್ಲಿ ಬಡತನ. ಮಗನಿಗೆ ಮಾತ್ರ ಇಡೀ ದೇಶವೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ