ತುಮಕೂರು: ಪ್ರಧಾನಿ ನರೇಂದ್ರ ಮೋದಿ (Narendra Modi Birthday) ಅವರ ಜನ್ಮದಿನದಂದೇ ಬಿಜೆಪಿ ಹಿರಿಯ ಮುಖಂಡರೊಬ್ಬರು ಬಿಜೆಪಿ ಕಾರ್ಯಕರ್ತನಿಗೆ ಕಪಾಳಮೋಕ್ಷ (BJP Member Slaps) ಮಾಡಿದ ಘಟನೆ ತುಮಕೂರಿನಲ್ಲಿ (Tumkur) ನಡೆದಿದೆ.
ಕೇಂದ್ರ ಜಲಶಕ್ತಿ ಹಾಗೂ ರೈಲ್ವೇ ರಾಜ್ಯ ಖಾತೆ ಸಚಿವ ವಿ.ಸೋಮಣ್ಣರ ಅವರ ಮುಂದೆಯೇ ಬಿಜೆಪಿ ಪಕ್ಷದೊಳಗೆ ಕಿತ್ತಾಟ ನಡೆದಿದ್ದು, ಮಾಜಿ ಸಚಿವ ಸೊಗಡು ಶಿವಣ್ಣರನ್ನು ತಳ್ಳಿದ್ದಕ್ಕೆ ಗಲಾಟೆ ಆರಂಭವಾಗಿದೆ.
ನಂತರ ಮಾತಿಗೆ ಮಾತು ಬೆಳೆದು ಸೊಗಡು ಶಿವಣ್ಣ, ರಕ್ಷಿತ್ ಎಂಬ ಬಿಜೆಪಿ ಕಾರ್ಯಕರ್ತನಿಗೆ ಕೆನ್ನೆಗೆ ಬಾರಿಸಿದ್ದಾರೆ ಎಂದು ತಿಳಿದು ಬಂದಿದೆ.
ಕೇಂದ್ರ ಸಚಿವರ ಮುಂದೆಯೇ ಭಾರೀ ಜಗಳ ನಡೆಯುವ ಮೂಲಕ ತುಮಕೂರು ಜಿಲ್ಲಾ ಬಿಜೆಪಿ ಘಟಕದಲ್ಲಿ ಎಲ್ಲವೂ ಸರಿಯಿಲ್ಲ ಅನ್ನೋದು ಮತ್ತೊಮ್ಮೆ ಜಗಜ್ಜಾಹೀರಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ವಿವಿಧ ಕಾರ್ಯಕ್ರಮಗಳಿಗೆ ಆಗಮಿಸಿದ್ದ ಕೇಂದ್ರ ಸಚಿವ ಸೊಮಣ್ಣ ಅವರ ಮುಂದೆಯೇ ಭಿನ್ನಮತ ಸ್ಫೋಟಗೊಂಡಿದೆ.
ಮೋದಿ ಹುಟ್ಟುಹಬ್ಬದ ಕಾರ್ಯಕ್ರಮವನ್ನು ತುಮಕೂರಿನ ಪ್ರವಾಸಿ ಮಂದಿರದ ಕೇಂದ್ರ ಸಚಿವರ ಕಚೇರಿಯಲ್ಲಿ ಆಯೋಜಿಸಲಾಗಿತ್ತು. ಈ ವೇಳೆ ಕೇಂದ್ರ ಸಚಿವರ ಕಚೇರಿ ಮುಂಭಾಗದಲ್ಲಿ ಗಲಾಟೆ ನಡೆದಿದೆ. ಕೇಂದ್ರ ಸಚಿವ ವಿ.ಸೋಮಣ್ಣ ಕಚೇರಿ ಮುಂದೆ ಕಿತ್ತಾಟ ನಡೆದರೂ ಸಹ ಬಿಜೆಪಿ ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್, ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ ಮುಖ ಪ್ರೇಕ್ಷಕರಾಗಿ ನಿಂತರು.
Laxmi News 24×7