Breaking News

ಸಿದ್ದಾಪುರ ಗೇಟ್‌ನಲ್ಲಿ ಅಹೋರಾತ್ರಿ ಉಪವಾಸ

Spread the love

ಕೊಣನೂರು: ‘ನಮಗೆ ನ್ಯಾಯ ಸಿಗುವವರೆಗೂ ಅಹೋರಾತ್ರಿ ಉಪವಾಸ ಸತ್ಯಾಗ್ರಹವನ್ನು ನಿಲ್ಲಿಸುವುದಿಲ್ಲ’ ಎಂದು ಸುವರ್ಣ ಕರ್ನಾಟಕ ರಕ್ಷಣಾ ಸೇನೆಯ ಸಂಸ್ಥಾಪಕ ಅಧ್ಯಕ್ಷ ಎಸ್.ರಾಘವೇಂದ್ರ ಗೌಡ ಆಕ್ರೋಶ ವ್ಯಕ್ತಪಡಿಸಿದರು.

ಕೊಣನೂರು ಮತ್ತು ರಾಮನಾಥಪುರ ಹೋಬಳಿಗಳ ಮೂಲಕ ಹಾದು ಹೋಗಿರುವ ಮಾಗಡಿ- ಸೋಮವಾರಪೇಟೆ ರಾಜ್ಯ ಹೆದ್ದಾರಿ ನಿರ್ಮಾಣದಲ್ಲಿ ಆಗಿರುವ ಲೋಪದೋಷಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ಸಿದ್ದಾಪುರ ಗೇಟ್ ಸರ್ಕಲ್‌ನಲ್ಲಿ ಸುವರ್ಣ ಕರ್ನಾಟಕ ರಕ್ಷಣಾ ಸೇನೆಯಿಂದ ಮಂಗಳವಾರದಿಂದ ಹಮ್ಮಿಕೊಂಡಿರುವ ಅಹೋರಾತ್ರಿ ಉಪವಾಸ ಸತ್ಯಾಗ್ರಹದಲ್ಲಿ ಅವರು ಮಾತನಾಡಿದರು.

 

‘ರಾಮನಾಥಪುರ ಹೋಬಳಿ ಹಾಗೂ ಕೊಣನೂರು ಹೋಬಳಿಗಳ ವ್ಯಾಪ್ತಿಯಲ್ಲಿ ಕೆಶಿಫ್-3 ಕರ್ನಾಟಕ ರಾಜ್ಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆಯಿಂದ ಮಾಗಡಿಯಿಂದ ಸೋಮವಾರಪೇಟೆ ಮಾಡಲಾಗುತ್ತಿದೆ. ಈ ಕಾಮಗಾರಿಯಲ್ಲಿ ಅನೇಕ ಲೋಪದೋಷಗಳು ಇರುವುದರಿಂದ ಅಪಘಾತಕ್ಕೆ ಕಾರಣವಾಗಿದೆ’ ಎಂದು ದೂರಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ