Breaking News

ಕನ್ನಡ ಸಾಹಿತ್ಯ ಪರಿಷತ್ತಿನ ಎಡವಟ್ಟು: ಅಧ್ಯಕ್ಷ ಸ್ಥಾನಕ್ಕೆ ಕೊಲೆ ಆರೋಪಿ ಆಯ್ಕೆ

Spread the love

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕ್ಕರೆ ನಗರಿ ಮಂಡ್ಯ ಜಿಲ್ಲೆ ಸಿದ್ಧವಾಗುತ್ತಿರುವ ಹೊತ್ತಲ್ಲೇ ಕನ್ನಡ ಸಾಹಿತ್ಯ ಪರಿಷತ್ತು ಎಡವಟ್ಟೊಂದನ್ನು ಮಾಡಿದೆ. ತಾಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ಕೊಲೆ ಆರೋಪಿಯನ್ನು ಆಯ್ಕೆ ಮಾಡಿದ್ದು, ವಿವಾದಕ್ಕೆ ಕಾರಣವಾಗಿದೆ.

BIG NEWS: ಕನ್ನಡ ಸಾಹಿತ್ಯ ಪರಿಷತ್ತಿನ ಎಡವಟ್ಟು: ಅಧ್ಯಕ್ಷ ಸ್ಥಾನಕ್ಕೆ ಕೊಲೆ ಆರೋಪಿ ಆಯ್ಕೆ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರನ್ನಾಗಿ ಎಂ.ಬಿ.ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಆದರೆ ಎಂ.ಬಿ.ಕುಮಾರ್ ವಿರುದ್ಧ ಕೊಲೆ ಆರೋಪವಿದೆ. ರೌಡಿಶೀಟರ್ ದೀಪು ಎಂಬಾತನ ಕೊಲೆ ಕೇಸ್ ನ 24ನೇ ಆರೋಪಿಯಾಗಿದ್ದಾರೆ. 2015ರ ಜು.3ರಂದು ರೌಡಿ ಶೀಟರ್ ದೀಪುನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಎಂ.ಬಿ.ಕುಮಾರ್ ಭಾಗಿಯಾಗಿದ್ದು, ಈ ಬಗ್ಗೆ ಗೊತ್ತಿದ್ದರೂ ಕೊಲೆ ಆರೋಪಿಯೊಬ್ಬನನ್ನು ತಾಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಡಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.


Spread the love

About Laxminews 24x7

Check Also

ರಸ್ತೆಗುಂಡಿ ಮುಚ್ಚಲು ನೀಡಿದ್ದ ಗಡುವು ಅಂತ್ಯ: ‘Please ask D.K.Shivakumar’ ಎಂದ ಸಿದ್ದರಾಮಯ್ಯ

Spread the loveಬೆಂಗಳೂರು: ರಾಜಧಾನಿಯಲ್ಲಿ ಹಾಳಾಗಿರುವ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳಿಗೆ ನೀಡಿದ್ದ ಗಡುವು ಇಂದಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ