Breaking News

ತಿರುಪತಿ ಲಾಡು ಪ್ರಸಾದದ ಬಗ್ಗೆ ಸಮಗ್ರ ತನಿಖೆಯಾಗಲಿ: ಪ್ರಲ್ಹಾದ ಜೋಶಿ

Spread the love

ಹುಬ್ಬಳ್ಳಿ: ತಿರುಪತಿ ಪ್ರಸಾದ ಲಾಡುವಿನ ಬಗ್ಗೆ ಗಂಭೀರ ಆರೋಪ ಕೇಳಿ ಬಂದಿದೆ. ಆಂಧ್ರಪ್ರದೇಶದ ಹಿಂದಿನ‌ ಸರ್ಕಾರ ಲಾಡು ತಯಾರಿಕೆಗೆ ರಾಜ್ಯದ ನಂದಿನಿ ತುಪ್ಪ‌ ತರಿಸಿಕೊಳ್ಳಲಾಗುತ್ತಿತ್ತು. ಅದನ್ನು ನಿಲ್ಲಿಸಿ, ಬೇರೆ ಕಡೆಯಿಂದ ತುಪ್ಪ ತರಿಸಿಕೊಳ್ಳಲು ಆರಂಭಿಸಿದಾಗಿನಿಂದ ಈ ರೀತಿ ಘಟನೆಗಳು ನಡೆದಿವೆ ಎಂದು ಕೇಂದ್ರ ಸಚಿವ ಪಲ್ಹಾದ ಜೋಶಿ ಹೇಳಿದರು.

 

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದಕ್ಕೆ ಸಂಬಂಧಿಸಿದ ಪ್ರಯೋಗಾಲಯದ ವರದಿಯನ್ನು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬಿಡುಗಡೆ ಮಾಡಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು. ತಪ್ಪಿತಸ್ಥರಿಗೆ ಶಿಕ್ಷೆ ಅಗಬೇಕು ಎಂದರು.

ಎಲ್ಲ‌ ದೇವಸ್ಥಾನಗಳಲ್ಲಿ ಸ್ವಚ್ಛತೆ, ಜನರ ಶ್ರದ್ಧೆಗೆ‌ ಧಕ್ಕೆ‌ ಆಗದಂತೆ ದೇವಸ್ಥಾನದ ಆಡಳಿತ ಮಂಡಳಿಯವರು ಕಾಲಕಾಲಕ್ಕೆ ಪರಿಶೀಲಿಸಬೇಕು. ಇದರಲ್ಲಿ ಸರ್ಕಾರ ಕೈಹಾಕಬಾರದು.‌ ಇದು ದೇಶದ ಜನರ ಶ್ರದ್ಧೆ, ಸಂಸ್ಕೃತಿಯ ಪ್ರಶ್ನೆ. ಈ ರೀತಿ ದ್ರೋಹ ಮಾಡುವುದು ಸರಿಯಲ್ಲ. ಇದನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ತಾರ್ಕಿಕ ಅಂತ್ಯಕ್ಕೆ ಕೊ‌ಂಡೊಯ್ಯುತ್ತೇವೆ ಎಂದು ಹೇಳಿದರು.


Spread the love

About Laxminews 24x7

Check Also

ನೈಋತ್ಯ ರೈಲ್ವೆ ಟಿಕೆಟ್ ಪರಿಶೀಲನೆ ಪ್ರಕರಣ, ದಂಡ ಸಂಗ್ರಹದಲ್ಲಿ ಹೆಚ್ಚಳ

Spread the loveಹುಬ್ಬಳ್ಳಿ: ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ