ಕರ್ತವ್ಯ ಮುಗಿಸಿ ಮನೆಗೆ ಬಂದಿದ್ದ ಪಿ.ಎಸ್.ಐ ಹೃದಯಾಘಾತದಿಂದ ಸಾವನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದಲ್ಲಿ ನಡೆದಿದೆ.
ಸುರೇಶ ಬಾಬಾಸಾಬ ಖೋತ (59) ಅವರು ರಾಯಬಾಗ ಪೊಲೀಸ್ ಠಾಣೆಯಲ್ಲಿ ಹೆಚ್ಚುವರಿ ಪಿಎಸ್‌ಐಯಾಗಿ ಕರ್ತವ್ಯನಿರ್ವಹಿಸುತ್ತಿದ್ದರು.
ಗಣೇಶೋತ್ಸವ ಹಿನ್ನೆಲೆಯಲ್ಲಿ ಬಂದೋಬಸ್ತ್ ಮುಗಿಸಿಕೊಂಡು ಮರಳಿ ಮನೆಗೆ ಬಂದಾಗ ಹೃದಯಾಘಾತವಾಗಿದೆ.
ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದ ನಿವಾಸದಲ್ಲಿ ಘಟನೆ ನಡೆದಿದ್ದು ತಕ್ಷಣವೇ ಮಹಾರಾಷ್ಟ್ರದ ಮೀರಜ್ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಪಿಎಸ್‌ಐ ಸಾವನ್ನಪ್ಪಿದ್ದರಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ
Laxmi News 24×7