Breaking News

ಧಾರವಾಡ, ವಿಜಯಪುರದಲ್ಲಿ ರಭಸದ ಮಳೆ

Spread the love

ಹುಬ್ಬಳ್ಳಿ: ಹಲವು ದಿನಗಳಿಂದ ಬಿಡುವು ನೀಡಿದ್ದ ಮಳೆ ಶನಿವಾರ ಧಾರವಾಡ, ವಿಜಯಪುರ, ಬಳ್ಳಾರಿ, ಬಾಗಲಕೋಟೆ ಜಿಲ್ಲೆಗಳ ಕೆಲವೆಡೆ ಸುರಿದಿದೆ.

ಧಾರವಾಡ ಜಿಲ್ಲೆ ನವಲಗುಂದ ಪಟ್ಟಣವೂ ಸೇರಿದಂತೆ ತಾಲ್ಲೂಕಿನ ವಿವಿಧಡೆ ಶನಿವಾರ ಸಂಜೆ ನಾಲ್ಕು ತಾಸು ನಿರಂತರ ಮಳೆಯಾಗಿದೆ. ಹಲವೆಡೆ ಮನೆಯೊಳಗೆ ಮಳೆ ನೀರು ನುಗ್ಗಿ ದಿನಸಿ ಹಾಗೂ ಕಾಳು ಕಡಿಗೆ ಹಾನಿಯಾಗಿದೆ.

 

ವಿಜಯಪುರ ನಗರ ಸೇರಿದಂತೆ ಮುದ್ದೇಬಿಹಾಳ, ತಿಕೋಟಾ, ಇಂಡಿ, ಸಿಂದಗಿ, ಬಸವನ ಬಾಗೇವಾಡಿಗಳಲ್ಲಿ ಶುಕ್ರವಾರ ಮತ್ತು ಶನಿವಾರ ಧಾರಾಕಾರ ಮಳೆ ಸುರಿಯಿತು. ಬಾಗಲಕೋಟೆ ಜಿಲ್ಲೆ ತೇರದಾಳ ಪಟ್ಟಣದಲ್ಲಿ ಅರ್ಧ ಗಂಟೆಗೂ ಕಾಲ ಮಳೆಯಾಗಿದೆ. ಬಳ್ಳಾರಿ ಜಿಲ್ಲಯಲ್ಲಿ ಶುಕ್ರವಾರ ತಡರಾತ್ರಿಯಲ್ಲಿ ಉತ್ತಮ ಮಳೆಯಾಗಿದ್ದು ಶನಿವಾರ ಬೆಳಗಿನ ಜಾವದಿಂದ ಜಿಟಿ ಜಿಟಿ ಮಳೆ ಬಿದ್ದಿದೆ.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ